ಚಿತ್ರದುರ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಾತ್ಮ ಗಾಂಧಿ ನರೇಗಾ ಯೋಜನೆ ವತಿಯಿಂದ ಬೆಂಗಳೂರು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ನರೇಗಾ ಹಬ್ಬ-2025 ದಲ್ಲಿ ಅತ್ಯುತ್ತಮವಾಗಿ ನರೇಗಾ ಯೋಜನೆ ಅನುಷ್ಠಾನಗೊಳಿಸಿದ ಚಿತ್ರರ್ದು ಜಿಲ್ಲೆಯ “ಸಾಮಾಜಿಕ ಅರಣ್ಯ ಇಲಾಖೆಗೆ ಅತ್ಯುತ್ತಮ ಜಿಲ್ಲಾ ಪ್ರಶಸ್ತಿ” ಲಭಿಸಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಚಳ್ಳಕೆರೆ ತಾಲ್ಲೂಕು ಬೆಳಗೆರೆ ಗ್ರಾಮ ಪಂಚಾಯಿತಿಗೆ “ಅತ್ಯುತ್ತಮ ಗ್ರಾಮ ಪಂಚಾಯಿತಿ” ಮತ್ತು ಚಿತ್ರದುರ್ಗ ತಾಲ್ಲೂಕಿನ ದ್ಯಾಮವನಹಳ್ಳಿ ಗ್ರಾಮ ಪಂಚಾಯಿತಿಯ ರೇಷ್ಮೆ ಬೆಳೆಗಾರರಾದ ಧನಲಕ್ಷ್ಮಿ ಅವರಿಗೆ “ವಿಶೇಷ ಪ್ರಸಂಶನಾ ಪತ್ರ” ವಿತರಣೆ ಪ್ರಶಸ್ತಿಯನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಎಸ್ ಹೊರಟ್ಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ವಿತರಿಸಿದರು.
“ನರೇಗಾ ಹಬ್ಬ-2025″ ಪ್ರಶಸ್ತಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಸಾಮಾಜಿಕ ಅರಣ್ಯ ಇಲಾಖೆಯ ಹರೀಶ್.ಕೆ ಮತ್ತು ಇಲಾಖೆಯ ಅಧಿಕಾರಿಗಳು, ಬೆಳಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ವಿಶಾಲಾಕ್ಷಿ, ಪಿಡಿಒ ದೇವೇಂದ್ರಪ್ಪ, ದ್ಯಾಮವ್ವನಳ್ಳಿ ಗ್ರಾಮ ಪಂಚಾಯತಿಯ ಧನಲಕ್ಷ್ಮಿ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ. ತಿಮ್ಮಪ್ಪ, ಜಿಲ್ಲಾ ಪಂಚಾಯತಿಯ ನರೇಗಾ ಶಾಖೆಯ ಎಡಿಪಿಸಿ ಮೋಹನ್ ಕುಮಾರ್, ಜಿಲ್ಲಾ ಐಇಸಿ ಸಂಯೋಜಕ ಎಂ.ಎಸ್.ರವೀಂದ್ರನಾಥ್, ಜಿಲ್ಲಾ ಎಂಐಎಸ್ ಸಂಯೋಜಕಿ ಡಿ.ಎಂ.ಸಹನಾ ಹಾಗೂ ಲೆಕ್ಕ ವ್ಯವಸ್ಥಾಪಕ ಸಿದ್ದಲಿಂಗ ತೇಜಸ್ವಿ ಅವರು ಪ್ರಶಸ್ತಿಗಳನ್ನು ಸ್ವೀಕರಿಸಿದರು.




