ಮಂಡ್ಯ: ಮೈಕ್ರೋ ಫೈನಾನ್ಸ್ಗಳ ಕಿರುಕುಳದಿಂದಾಗಿ ಬಡಜನರು ಸಾಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ತೆರೆದಿಲ್ಲ. ಮೈಕ್ರೋ ಫೈನಾನ್ಸ್ನಿಂದ ಸತ್ತವರಿಗೆ ನ್ಯಾಯ ನೀಡಲು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ, ಮೈಕ್ರೋ ಫೈನಾನ್ಸ್ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್.ಅಶೋಕ ಭೇಟಿ ನೀಡಿ ಸಾಂತ್ವನ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ ಆರು ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಓಡಿಹೋಗಿರಬಹುದು. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ, ಸಾವುಗಳು ನಿಲ್ಲಲಿಲ್ಲ ಎಂದರು.
ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್ ಮೈಕ್ರೋ ಫೈನಾನ್ಸ್ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರಿಗೆ ಕಣ್ಣಿಲ್ಲ. ಕೊನ್ನಾಪುರ ಗ್ರಾಮದಲ್ಲಿ ಚಾಮುಂಡೇಶ್ವರಿ, ನವಚೇತನ, ಸೂರ್ಯೋದಯ, ಯುನಿಟಿ, ಪ್ರಗತಿ ಸೇರಿದಂತೆ 24 ಮೈಕ್ರೋ ಫೈನಾನ್ಸ್ಗಳು ಈ ಹಳ್ಳಿಗೆ ಬಂದು ವರ್ಷಕ್ಕೆ 12% ರಂತೆ ಸಾಲ ನೀಡಿವೆ ಎಂದರು.
ಒಬ್ಬರಿಗೆ ಒಂಬತ್ತು ಜನರು ಶೂರಿಟಿ ನೀಡಿದ್ದಾರೆ. ಒಬ್ಬರು ಸಾಲ ಮರುಪಾವತಿ ಮಾಡಿಲ್ಲವೆಂದರೆ ಉಳಿದವರು ಹೊಣೆಯಾಗುತ್ತಾರೆ. ಸಾಲ ಕಟ್ಟದೆ ಮಾನ ಹೋದಾಗ ನೊಂದವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. *ಪೊಲೀಸರು ಕೂಡ ಇಲ್ಲಿ ಮೈಕ್ರೋ ಫೈನಾನ್ಸ್ಗೆ* ಬೆಂಬಲ ನೀಡಿದ್ದಾರೆ. ಮನೆ ವಶಕ್ಕೆ ಪಡೆಯುವ ಸಮಯದಲ್ಲಿ ಪೊಲೀಸರು ಕುಟುಂಬ ಸದಸ್ಯರನ್ನು ಎಳೆದು ಹೊರಗೆ ಹಾಕಿದ್ದಾರೆ ಎಂದರು.
ಮಂಡ್ಯದಲ್ಲಿ 60 ಮೈಕ್ರೋ ಫೈನಾನ್ಸ್ಗಳಿದ್ದು, ಕೇವಲ 18 ಮಾತ್ರ ಅಧಿಕೃತವಾಗಿವೆ. ಉಳಿದವುಗಳಲ್ಲಿ ರೌಡಿಗಳಿದ್ದಾರೆ. ತಹಶೀಲ್ದಾರ್ ಹಾಗೂ ಪೊಲೀಸರು ಎಲ್ಲ ಹಳ್ಳಿಗೂ ಹೋಗಿ ಕ್ರಮ ಕೈಗೊಳ್ಳಬೇಕಿತ್ತು. ಈ ಸಾವುಗಳಿಗೆ ನ್ಯಾಯ ನೀಡಲು ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಬೇಕು. ಅನಧಿಕೃತ ಮೈಕ್ರೋ ಫೈನಾನ್ಸ್ಗಳನ್ನು ಪತ್ತೆ ಮಾಡಿ ಕ್ರಮ ವಹಿಸಬೇಕು ಎಂದರು.




