ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಸ್ಕೋ ಪ್ರಕರಣವನ್ನು ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಆದರೆ ಅವರ ವಿರುದ್ಧ ದಾಖಲಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದುವರೆಸಲಿದೆ. ತಾಂತ್ರಿಕ ಕಾರಣಕ್ಕೆ ಈ ಪ್ರಕರಣವನ್ನು ಹೈಕೋರ್ಟ್ ಪೋಸ್ಕೋ ಕೋರ್ಟ್ ಗೆ ಮರಳಿಸಿದೆ. ಹೀಗಾಗಿ ಯಡಿಯೂರಪ್ಪ ಅವರು ವಿಚಾರಣೆಯನ್ನು ಎದುರಿಸಲೇಬೇಕು ಎಂದು ಹೇಳಿರುವ ನ್ಯಾಯಾಲಯ, ವಿಚಾರಣೆಗೆ ತನಿಖಾಧಿಕಾರಿಗಳು ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.
ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್ ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.


