ಮೆಟ್ರೋ ದರ ಏರಿಕೆ ಮೂಲಕ ಜನಸಾಮಾನ್ಯರ ಗಾಯದ ಮೇಲೆ ಬರೆ: ಆರ್ ಅಶೋಕ್

2 years ago

ಪೆಟ್ರೋಲ್, ಡೀಸೆಲ್, ಹಾಲು, ಬಸ್ಸು ದರ ಏರಿಕೆಯ ಬರೆಯಿಂದ ಈಗಾಗಲೇ ಹೈರಾಣಗಿರುವ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಬೆಂಗಳೂರು ಮೆಟ್ರೋ ದರವನ್ನ ಏಕಾಏಕಿ 50% ಏರಿಸುವ ಮೂಲಕ ಜನಸಾಮಾನ್ಯರ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ.

ಸ್ವಾಮಿ ಸಿಎಂ @siddaramaiah ನವರೇ, ಮೆಟ್ರೋ ದರ 50% ಏರಿಕೆ ಮಾಡಿರುವುದರಿಂದ   ಅನೇಕ ಜನಸಾಮಾನ್ಯರಿಗೆ ಈಗ ಮೆಟ್ರೋ ಸಂಚಾರ ಕೈಗೆಟುಕದ ಪರಿಸ್ಥಿತಿ ಎದುರಾಗಿದ್ದು. ಮೆಟ್ರೋ ಪ್ರಯಾಣಕ್ಕಿಂತ ಸ್ವಂತ ಸ್ಕೂಟರ್, ಬೈಕಿನ ಪ್ರಯಾಣ ಜೇಬಿಗೆ ಹಿತ ಎನ್ನುವಂತಾಗಿದೆ.

ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸಿ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ, ಪರಿಸರ ಮಾಲಿನ್ಯಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಸರ್ಕಾರ, ಜನರನ್ನು ಮೆಟ್ರೋದಿಂದ ವಿಮುಖರಾಗುವಂತೆ ಮಾಡುತ್ತಿದೆ.

ಈ ಕೊಡಲೇ ಮೆಟ್ರೋ ದರ ಏರಿಕೆಯ ನಿರ್ಧಾರವನ್ನ ಹಿಂಪಡೆಯಬೇಕು ಎಂದು @INCKarnataka ಸರ್ಕಾರವನ್ನು ಒತ್ತಾಯಿಸುತ್ತೇನೆ.

– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ

Leave a Reply