ಕಲಬುರ್ಗಿ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕಲಬುರ್ಗಿ ಜಿಲ್ಲೆಯ ಬ್ರಾಂಚ್ ಪದಾಧಿಕಾರಿಗಳು ಮತ್ತು ವಿಧಾನಸಭಾ ಕ್ಷೇತ್ರ ಸಮಿತಿಯ ನಾಯಕರುಗಳಿಗೆ ಆಯೋಜಿಸಿದ್ದ ಒಂದು ದಿನದ ಲೀಡ್ – 1 ನಾಯಕತ್ವ ತರಬೇತಿ ಶಿಬಿರ ಯಶಸ್ವಿಯಾಗಿ ಜರುಗಿತು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸಮಿತಿ ಸದಸ್ಯೆ ಪ್ರೊ.ಸೈಯೀದಾ ಸಾದಿಯ, ರಾಜಕೀಯದ ಭೂಮಿಯಲ್ಲಿ, ನಾಯಕತ್ವವು ಕೇವಲ ಒಂದು ಸ್ಥಾನವಲ್ಲ; ಅದು ರಾಷ್ಟ್ರಗಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯಾಗಿದೆ. ಉತ್ತಮ ನಾಯಕನ ಗುಣಗಳು ಸಮಾಜದ ಯಶಸ್ಸು ಮತ್ತು ಯೋಗಕ್ಷೇಮವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದರು.
ಶಿಬಿರದಲ್ಲಿ ರಾಷ್ಟ್ರೀಯ ಸಮಿತಿ ಸದಸ್ಯೆ ಪ್ರೊ. ಸೈಯೀದಾ ಸಾದಿಯಾ, ರಾಜ್ಯ ಪ್ರದಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ, ರಾಜ್ಯ ನಾಯಕರುಗಳಾದ ಸಲೀಂ ಅವುಟಿ, ಜಾಫರ್ ವಿವಿಧ ವಿಷಯಗಳಲ್ಲಿ ತರಬೇತಿ ನೀಡಿದರು.
ಶಿಬಿರದಲ್ಲಿ ಜಿಲ್ಲಾಧ್ಯಕ್ಷ ಮೊಹಮ್ಮದ್ ಮೊಹ್ಸಿನ್, ಜಿಲ್ಲಾ ಉಪಾಧ್ಯಕ್ಷ ಸೈಯದ್ ದಸ್ತೇಗೀರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ರಿಜ್ವಾನ್ ಮತ್ತು ಇಬ್ರಾಹಿಂ ಪಟೇಲ್, ಜಿಲ್ಲಾ ಕಾರ್ಯದರ್ಶಿ ಶಕೀಲ್ ಪಟೇಲ್, ವಿಮೆನ್ ಇಂಡಿಯಾ ಮೂಮೆಂಟ್ ನಾಯಕಿಯರು ಮತ್ತು ಪಕ್ಷದ ಮುಖಂಡರು ಹಾಜರಿದ್ದರು.



