ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಸಮರ ಸಾರಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅಚ್ಚರಿಯ ನಿರ್ಧಾರ ಪ್ರಕಟಿಸಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಸಿದ್ದರಾಮಯ್ಯ ವಿರುದ್ಧದ ಅಧಿಕಾರ ದುರ್ಬಳಕೆ ಮತ್ತು ಅಕ್ರಮ ಆರೋಪದ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಸ್ನೇಹ ಮಯಿ ಕೃಷ್ಣ ಇನ್ನು ಮುಂದೆ ಈ ಪ್ರಕರಣದಲ್ಲಿ ತಾವೇ ನ್ಯಾಯಾಲಯದ ಮುಂದೆ ವಾದ ಮಂಡಿಸುವ ತೀರ್ಮಾನಕ್ಕೆ ಬಂದಿದ್ದಾರೆ.
ಸಿಬಿಐ ತನಿಖೆ ಕೋರಿ ತಾವು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಈ ಆದೇಶದ ವಿರುದ್ಧ ಸುಪ್ರೀಂಕೋರ್ಟಿಗೆ ಮೇಲ್ಮಮನವಿ ಸಲ್ಲಿಸುವುದಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು.
ತಮ್ಮ ಅರ್ಜಿ ಕುರಿತು ಹೈಕೋರ್ಟ್ ನೀಡಿರುವ ಆದೇಶದ ಬಗ್ಗೆ ಎರಡು ದಿನಗಳ ಕುರಿತು ಸುದೀರ್ಘ ಅಧ್ಯಯನ ನಡೆಸಿದ್ದೇನೆ. ತಮ್ಮ ವಕೀಲರು ಹಾಗೂ ಹಿತೈಷಿಗಳ ಜೊತೆ ಸಮಾಲೋಚನೆ ನಡೆಸಿದ್ದು, ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ತೀರ್ಮಾನಿಸಿದ್ದೇನೆ ಎಂದಿದ್ದಾರೆ.
ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಸುದೀರ್ಘ ಹೇಳಿಕೆ ನೀಡಿರುವ ಅವರು, ಪ್ರಕರಣದ ಬಗ್ಗೆ ಮೇಲ್ಮನವಿ ಸಲ್ಲಿಸಿದರೆ ತನಿಖೆ ಮತ್ತಷ್ಟು ವಿಳಂಬವಾಗಲಿದೆ. ಇದರ ಬದಲಿಗೆ ತಮ್ಮ ಬಳಿ ಇರುವ ದಾಖಲೆಗಳ ಮೂಲಕ ಲೋಕಾಯುಕ್ತರ ತನಿಖೆಗೆ ನೆರವು ನೀಡುವುದು, ಆ ಮೂಲಕ ತಪ್ಪಿತಸ್ಥರಿಗೆ ಆದಷ್ಟು ಶೀಘ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು ತಮ್ಮ ಆದ್ಯತೆಯಾಗಿದೆ ಎಂದಿದ್ದಾರೆ.
ಲೋಕಾಯುಕ್ತ ತನಿಖೆ ಮುಗಿದ ನಂತರ ನ್ಯಾಯಾಲಯದಲ್ಲಿ ಪ್ರಕರಣದ ಕುರಿತು ಯಾವುದೇ ವಕೀಲರನ್ನು ನೇಮಕ ಮಾಡಿಕೊಳ್ಳದೆ ತಮ್ಮ ಬಳಿ ಇರುವ ದಾಖಲೆಗಳ ಮೂಲಕ ತಾವೇ ವಾದ ಮಂಡಿಸಲು ತೀರ್ಮಾನಿಸಿದ್ದೇನೆ. ತಮ್ಮ ಈ ನಿಲುವಿನ ಬಗ್ಗೆ ಪರ -ವಿರೋಧದ ಅಭಿಪ್ರಾಯಗಳು ಕೇಳಿಬರಬಹುದು. ಆದರೆ, ಈ ಬಗ್ಗೆ ಗಮನ ಹರಿಸದೆ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವ ಕಡೆ ಗಮನ ಹರಿಸುತ್ತೇನೆ ಎಂದಿದ್ದಾರೆ.




