ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಜೊತೆ ಬಹಿರಂಗ ಸಂಘರ್ಷಕ್ಕಿಳಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ ಮತ್ತೊಮ್ಮೆ ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೇಕು ಎಂಬ ಹಕ್ಕು ಮಂಡಿಸಿದ್ದಾರೆ. ಇದಕ್ಕಾಗಿ ತಾವು ಸಚಿವ ಸ್ಥಾನ ದೊರೆಯಲು ಸಿದ್ದ ಎಂದಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ದೆಹಲಿಯಲ್ಲಿ ಬೀಡು ಬಿಟ್ಟಿರುವ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮತ್ತು ಕೆ ಸಿ ವೇಣುಗೋಪಾಲ್ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಮತ ಬ್ಯಾಂಕನ್ನು ಗಟ್ಟಿಗೊಳಿಸುವ ದೃಷ್ಟಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಸಂಘಟನೆಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮೂರು ಕಡೆ ಸಮುದಾಯದ ಸಮಾವೇಶ ನಡೆಸಲು ಅನುಮತಿ ನೀಡುವಂತೆ ಕೋರಿದ್ದಾರೆ.
ಹೈಕಮಾಂಡ್ ಜೊತೆ ತಾವು ನಡೆಸಿದ ಮಾತುಕತೆಗಳ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ತಮ್ಮನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬಿಡುಗಡೆ ಮಾಡಿ ಎಂದು ಕೇಳಿರುವೆ. ನಾನು ತುಮಕೂರು ಜಿಲ್ಲೆ ಹಾಗೂ ಪಕ್ಷ ಸಂಘಟನೆಗೆ ಗಮನ ನೀಡಬೇಕಿದೆ. ಈ ಸಂಬಂಧ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ನೀಡಿರುವೆ ಎಂದರು.
ನಮ್ಮ ಪಕ್ಷದ ಹಿರಿಯ ಮುಖಂಡರನ್ನು ಭೇಟಿ ಮಾಡಿದ್ದೇನೆ. ಖರ್ಗೆ ಅವರನ್ನು ಭೇಟಿಯಾಗಿ, ಸರ್ಕಾರ ಮತ್ತು ಪಕ್ಷದ ಬೆಳವಣಿಗೆ ಕುರಿತು ಗಮನಕ್ಕೆ ತಂದಿದ್ದೇನೆ. ಆದರೆ ಯಾವ ವಿಚಾರ ಚರ್ಚೆ ಮಾಡಿದ್ದೇನೆ ಎಂದು ಹೇಳಲು ಸಾಧ್ಯವಿಲ್ಲ ಎಂದರು.
ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ಸುರ್ಜೇವಾಲಾ ಅವರಿಗೆ ನಾನು ಹೇಳಬೇಕಿದ್ದ ವಿಷಯ ಲಿಖಿತವಾಗಿ ತಿಳಿಸಿದ್ದೇನೆ. ಪಕ್ಷ ಸಂಘಟನೆ ಮಾಡಿ 2028ರಲ್ಲಿ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ. ನಾನು ಗಮನಕ್ಕೆ ತಂದ ಅಂಶಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಪಕ್ಷ ಸಂಘಟನೆಗೆ ಎರಡು ಅಂಶಗಳು ಹೇಳಿದ್ದೇನೆ. ಚುನಾವಣೆಯಲ್ಲಿ ಗೆಲ್ಲುಲು ಸಾಧ್ಯವಾಗದ ಕೆಳ ಸಮುದಾಯದ ನಾಯಕರಿಗೆ ಅವಕಾಶ ನೀಡಬೇಕು. ಇದರಿಂದ ಪಕ್ಷಕ್ಕೆ ಕೆಳ ಸಮುದಾಯದ ಬೆಂಬಲ ಸಿಗುತ್ತೆ ಎಂದು ಹೇಳಿದ್ದೇನೆ. ಈ ಸಮುದಾಯದ ವಿಶ್ವಾಸ ಗಳಿಸುವ ದೃಷ್ಟಿಯಿಂದ ಚಿತ್ರದುರ್ಗ, ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿ ಸಮಾವೇಶ ನಡೆಸಲು ಅನುಮತಿ ಪಡೆದುಕೊಳ್ಳಲಾಗಿದೆ ಎಂದರು.
ದಲಿತ ಸಮುದಾಯದವರೊಬ್ಬರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂಬ ಬೇಡಿಕೆಯಲ್ಲಿ ಯಾವುದೇ ತಪ್ಪು ಇಲ್ಲ ಸ್ವಾತಂತ್ರ ಬಂದು ಇಷ್ಟು ದಿನವಾದರೂ ಈ ಸಮುದಾಯಕ್ಕೆ ಸೇರಿದವರು ಮುಖ್ಯಮಂತ್ರಿಯಾಗದೆ ಇರುವುದು ವಿಷಾದನೀಯ ಸಂಗತಿ ಎಂದರು.
ತಳ ಸಮುದಾಯಗಳು ಕಾಂಗ್ರೆಸ್ ಪಕ್ಷದ ಆಸ್ತಿಯಾಗಿವೆ ಅವುಗಳನ್ನು ಪಕ್ಷದ ತೆಕ್ಕೆಗೆ ತೆಗೆದುಕೊಳ್ಳಬೇಕು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಸಮಯದಲ್ಲಿ ತಳ ಸಮುದಾಯದವರಿಗೆ ಆದ್ಯತೆ ನೀಡಬೇಕು. ವಿಧಾನ ಪರಿಷತ್ ನೇಮಕಾತಿಯಲ್ಲೂ ಈ ಸಮುದಾಯಗಳಿಗೆ ಮಾನ್ಯತೆ ನೀಡಬೇಕು ಎಂದು ಹೈಕಮಾಂಡ್ ಗೆ ಮನವಿ ಸಲ್ಲಿಸಿರುವುದಾಗಿ ಹೇಳಿದರು.
ತಳ ಸಮುದಾಯಗಳನ್ನು ಸಂಘಟಿಸಲು ಆದ್ಯತೆ ನೀಡಲು ಮುಂದಾಗಿದ್ದೇನೆ. ಇದಕ್ಕಾಗಿ ಪಕ್ಷದ ಅಧ್ಯಕ್ಷ ಸ್ಥಾನ ನೀಡುವಂತೆ ಕೇಳಿದ್ದೇನೆ. ಮಧುಗಿರಿಯಲ್ಲಿ ಗೆದ್ದಿರುವ ನಾನು ಕೇವಲ ಪರಿಶಿಷ್ಟ ವರ್ಗದ ಮತಗಳಿಂದ ಗೆದ್ದಿಲ್ಲ. ತಳ ಸಮುದಾಯ ದೊಡ್ಡ ಬೆಂಬಲ ಸಿಕ್ಕಿದ್ದರಿಂದ ಮಾತ್ರ ಗೆಲುವು ಸಾಧ್ಯವಾಗಿದೆ ಎಂದರು.




