ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಇದಕ್ಕೆ ಸಜ್ಜಾಗಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಕರೆ ನೀಡಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಮಾಜಿ ಸಂಸದ ಶಿವರಾಮಗೌಡ ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಸೇರಿದಂತೆ ಇತರರನ್ನು ಪಕ್ಷಕ್ಕೂ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸದ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ ಎಂದರು.
ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು, ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ಈ ಚುನಾವಣೆಗಳ ಸಿದ್ಧತೆಗಾಗಿ ಪಕ್ಷದ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ಎಲ್ಲೆಲ್ಲಿ ನಾಯಕರ ಮಧ್ಯೆ ಹೊಂದಾಣಿಕೆ ಸಾಧಿಸಿ, 50% ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡುವ ಬಗ್ಗೆ ವರದಿ ಸಲ್ಲಿಸಬೇಕು ಎಂದರು.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿವಿಧ ನಾಯಕರು ಹಂತ ಹಂತವಾಗಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಈಗ ಎಲ್.ಆರ್ ಶಿವರಾಮೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಜೆಡಿಎಸ್ ಪಕ್ಷದಿಂದ ಸಂಸತ್ ಸದಸ್ಯರಾಗಿದ್ದರು. ಅದೇ ರೀತಿಯಲ್ಲಿ ಬ್ರಿಜೇಶ್ ಕಾಳಪ್ಪ ಅವರು ಕೂಡ ಆಪ್ ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಸದ್ಯದಲ್ಲಿಯೇ ಇನ್ನಷ್ಟು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದರು.
ಇತರೆ ಪಕ್ಷಗಳ ಶಾಸಕರು ಸೇರಿದಂತೆ ಕಾಂಗ್ರೆಸ್ ಸೇರಲು ಬಯಸುವವರ ದೊಡ್ಡ ಪಟ್ಟಿ ಇದೆ. ಕೆಲವು ನಾಯಕರ ಬಗ್ಗೆ ಸ್ಥಳೀಯವಾಗಿ ಚರ್ಚೆ ಮಾಡಿ ತೀರ್ಮಾನ ಮಾಡಬೇಕಿದೆ. ಚರ್ಚೆ ಮಾಡಿ ಹಂತ ಹಂತವಾಗಿ ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ. ಎಲ್ಲಾ ನದಿಗಳು ಸಮುದ್ರ ಸೇರುವಂತೆ ಎಲ್ಲಾ ಪಕ್ಷಗಳ ನಾಯಕರು ನಮ್ಮ ಸಿದ್ಧಾಂತ, ನಾಯಕತ್ವ ಒಪ್ಪಿ ಪಕ್ಷ ಸೇರುತ್ತಿದ್ದಾರೆ ಎಂದರು.
ರಾಜ್ಯದಲ್ಲಿ 100 ಕಾಂಗ್ರೆಸ್ ಕಚೇರಿ ನಿರ್ಮಿಸುವ ಹಿನ್ನೆಲೆಯಲ್ಲಿ ಇವುಗಳ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಲು ದಿನಾಂಕ ನಿಗದಿ ಮಾಡುವಂತೆ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದೇನೆ. ಈ ಕಾರ್ಯಕ್ಕೆ ನಾಲ್ಕು ವಿಭಾಗಗಳಲ್ಲಿ ಸಮಿತಿ ರಚಿಸಲಾಗಿದೆ ಎಂದರು.
ಕಚೇರಿ ಕಟ್ಟಡ ನಿರ್ಮಾಣ ಮಾಡುವ ಜಾಗ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ನೋಂದಣಿ ಆಗದಿದ್ದರೆ ಅಲ್ಲಿ ನಮ್ಮ ನಾಯಕರಿಂದ ಶಂಕುಸ್ಥಾಪನೆ ಮಾಡಿಸುವುದಿಲ್ಲ. ಈ ಕಟ್ಟಡ ನಿರ್ಮಾಣದ ಜಾಗ ವೈಯಕ್ತಿಕ ಹೆಸರು, ಬೇರೆ ಟ್ರಸ್ಟ್ ಹೆಸರಿನಲ್ಲಿ ಇರುವಂತಿಲ್ಲ ಎಂದರು.




