ಬೆಂಗಳೂರು: ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಸಂಬಂಧ ಕಿರುತೆರೆಯ ಸೀರಿಯಲ್ಗಳಲ್ಲಿ ನಟಿಸಿ ಹೆಸರು ಮಾಡಿರುವ ನಟ ಚರಿತ್ ಬಾಳಪ್ಪನನ್ನು ರಾಜರಾಜೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ತನಗೆ ಪರಿಚಯವಿದ್ದ ಸ್ನೇಹಿತೆಯನ್ನು ಪ್ರೀತಿಸುತ್ತೇನೆ ಎಂದು ನಂಬಿಸಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ದೂರು ಆಧರಿಸಿ ಚರಿತ್ ಬಾಳಪ್ಪನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಅಲ್ಲದೆ, ಯುವತಿ ವಾಸ ಮಾಡುತ್ತಿದ್ದ ಮನೆಗೆ ನುಗ್ಗಿ ಸಹಚರರ ಜೊತೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೂಡ ಚರಿತ್ ಬಾಳಪ್ಪ ವಿರುದ್ಧ ಯುವತಿ ನೀಡಿರುವ ದೂರಿನಲ್ಲಿದೆ.
ಲೈಂಗಿಕ ದೌರ್ಜನ್ಯ ಮಾತ್ರವಲ್ಲದೇ ಚರಿತ್ ಬಾಳಪ್ಪ ಆ ಯುವತಿಯ ಬಳಿ ಹಣಕ್ಕೂ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೂಡಾ ಇದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಎಲ್ಲ ದೂರುಗಳನ್ನು ಆಧರಿಸಿ ಚರಿತ್ ಬಾಳಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ, ಹಲ್ಲೆ ಮುಂತಾದ ಕೇಸ್ ದಾಖಲಾಗಿದೆ.
ಈಗಾಗಲೇ ಪತ್ನಿಯಿಂದ ಚರಿತ್ ಬಾಳಪ್ಪ ಡಿವೋರ್ಸ್ ಪಡೆದಿದ್ದಾರೆ. ಈ ಹಿಂದೆ ಚರಿತ್ ಬಾಳಪ್ಪ ವಿರುದ್ಧವೇ ಪತ್ನಿ ಮಂಜುಶ್ರೀ ಕೂಡ ದೂರು ನೀಡಿದ್ದರು. ಕೋರ್ಟ್ ಆಜ್ಞೆಯಂತೆ ಡಿವೋರ್ಸ್ ಪರಿಹಾರ ಹಣಕ್ಕೆ ನೋಟಿಸ್ ಕಳಿಸಿದ್ದಕ್ಕೆ ಪತ್ನಿಗೆ ಚರಿತ್ ಬಾಳಪ್ಪ ಬೆದರಿಕೆ ಹಾಕಿದ್ದರು. ಆ ಕುರಿತು 2024ರ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿತ್ತು.
ಕನ್ನಡದ ‘ಮುದ್ದುಲಕ್ಷ್ಮಿ’ ಸೇರಿದಂತೆ ಹಲವು ಸೀರಿಯಲ್ಗಳಲ್ಲಿ ಚರಿತ್ ಬಾಳಪ್ಪ ನಟಿಸಿದ್ದಾರೆ. ತೆಲುಗಿನ ಅನೇಕ ಸೀರಿಯಲ್ಗಳಲ್ಲೂ ಅಭಿನಯಿಸಿದ್ದಾರೆ. ಈಗ ಗಂಭೀರ ಆರೋಪದ ಮೇಲೆ ಅವರ ಬಂಧನವಾಗಿದೆ.




