ಬೆಂಗಳೂರು: ರಾಜ್ಯದಲ್ಲಿ ಯಾವಾಗ ಏನು ನಿರ್ಧಾರ ತೆಗೆದುಕೊಳ್ಳಬೇಕು ಎನ್ನುವ ಕುರಿತಂತೆ ಹೈಕಮಾಂಡ್ ಪ್ರಕಟಿಸಲಿದೆ. ಅದಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಹಕಾರ ಮಂತ್ರಿ ರಾಜಣ್ಣ ನಡುವೆ ನಡೆಯುತ್ತಿರುವ ಜಟಾಪಟಿ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಇಬ್ಬರೂ ತಮ್ಮ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದ್ದು ಸೂಕ್ತ ಸಮಯದಲ್ಲಿ ನಿರ್ಧಾರ ಪ್ರಕಟಿಸಲಿದೆ ಎಂದರು.
ಈ ನಡುವೆ ರಾಜ್ಯದಲ್ಲಿ ಶೋಷಿತರ ಸಮಾವೇಶದ ಮೂಲಕ ಶಕ್ತಿಪ್ರದರ್ಶನಕ್ಕೆ ಸಜ್ಜುಗೊಂಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವರಿಷ್ಠರ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಹೀಗಿರುವಲ್ಲಿ ಪರಮೇಶ್ವರ್ ದೆಹಲಿಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಈ ನಡುವೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸುಧೀರ್ಘ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಕೆಲ ನಾಯಕರ ಹೇಳಿಕೆಯಿಂದ ಅನಗತ್ಯ ಗೊಂದಲ ಸೃಷ್ಟಿಯಾಗಿದೆ. ಕೂಡಲೇ ಹೈಕಮಾಂಡ್ ಮಧ್ಯಪ್ರದೇಶಿಸಿ ಈ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂದು ಮನವಿ ಮಾಡಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಹೈಕೋರ್ಟ್ ಆದೇಶದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಬೇಕಾಗಿದೆ. ಇಂತಹ ಸಮಯದಲ್ಲಿ ನಾಯಕತ್ವ ಬದಲಾವಣೆ ಮಾಡಿದರೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ. ಹೀಗಾಗಿ ಚುನಾವಣೆ ಮುಗಿಯುವವರೆಗೆ ಯಾವುದೇ ತೀರ್ಮಾನ ಕೈಗೊಳ್ಳದಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.




