ಬೆಂಗಳೂರು: ಆಲ್ ಈಸ್ ವೆಲ್ ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯ ಅವರೇ ರಾಜ್ಯದ ಹಣಕಾಸು ಪರಿಸ್ಥಿತಿಯ ಬಗ್ಗೆ ಶ್ವೇತ ಪತ್ರವನ್ನು ಹೊರಡಿಸಿ ರಾಜ್ಯದ ಜನತೆಗೆ ವಸ್ತು ಸ್ಥಿತಿಯ ಮಾಹಿತಿ ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಪಕ್ಷದ ನಾಯಕರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಟ್ಟ ಗ್ಯಾರಂಟಿ ಜೊತೆಗೆ ಪ್ರಣಾಳಿಕೆಯ ಭರವಸೆ ಈಡೇರಿಸದ ನೀವು ಈಗ ಹೊಸದಾಗಿ ಹೊಸ ಭರವಸೆ ಕೊಡಲು ಹೊರಟಿದ್ದೀರಾ? ಈ ರಾಜ್ಯದ ಜನರನ್ನು ನೀವು ಬಿಕ್ಷುಕರು ಎಂದುಕೊಂಡಿರಾ? ಎಂದು ಪ್ರಶ್ನಿಸಿದರು.
ಕಳೆದ ಐದಾರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಪಾವತಿಸುತ್ತಿಲ್ಲ. ನಿರುದ್ಯೋಗಿ ಯುವ ಜನರಿಗೆ ನಿರುದ್ಯೋಗ ಭತ್ಯೆ ಕೊಡುತ್ತಿಲ್ಲ. ವೃದ್ಧಾಪ್ಯ ವೇತನ ಸಂಧ್ಯಾ ಸುರಕ್ಷಾ ಮೊದಲಾದ ಸಾಮಾಜಿಕ ಭದ್ರತಾ ಯೋಜನೆಗಳು ಹಣವಿಲ್ಲದೆ ಸ್ಥಗಿತಗೊಂಡಿವೆ ಎಂದರು.
ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿ ಬದಲು ನೀಡುತ್ತಿದ್ದ ಹಣ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಕಿಲೋ ಅಕ್ಕಿಯನ್ನು 22 ರೂ.ಗೆ ಕೊಡಲು ಸಿದ್ಧ ಎಂದು ಹೇಳಿದೆ. ಆದರೆ ಅದನ್ನು ಖರೀದಿಸಲು ರಾಜ್ಯ ಸರ್ಕಾರ ಮುಂದೆ ಬರುತ್ತಿಲ್ಲ. ಸಾರಿಗೆ ಇಲಾಖೆಗೆ ಶಕ್ತಿ ಯೋಜನೆಯ 7 ಸಾವಿರ ಕೋಟಿ ರೂ. ಬಾಕಿಯನ್ನು ರಾಜ್ಯ ಸರ್ಕಾರ ನೀಡಬೇಕಿದೆ. ಇದನ್ನು ಪಾವತಿಸುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ ಹೀಗಾಗಿ ರಾಜ್ಯ ಸಾರಿಗೆ ಇಲಾಖೆ ಬಾಗಿಲು ಮುಚ್ಚುವ ಹಂತಕ್ಕೆ ಬಂದಿದೆ ಎಂದರು.
ರಾಜ್ಯದಲ್ಲಿ ಕ್ರೋಡೀಕೃತ ಹಣ ಉಪಯೋಗ ಆಗುತ್ತಿದೆಯೇ ದುರುಪಯೋಗ ಆಗುತ್ತಿದೆಯೇ? ಗ್ಯಾರಂಟಿಗಳ ಬಗ್ಗೆ ನಮ್ಮ ವಿರೋಧವಿಲ್ಲ; ಅದರ ಅನುಷ್ಠಾನ ಆಗಲೇಬೇಕು. ಯುವನಿಧಿ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದರು.
ಪರಿಶಿಷ್ಟ ಜಾತಿ, ಪಂಗಡದ ಹಣವನ್ನು ಗ್ಯಾರಂಟಿಗೆ ಬಳಸಿದ್ದಾರೆ. ಇದರ ವಿರುದ್ಧ ಆ ಸಮಾಜದ ಮುಖಂಡರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ನಮಗೆ ಅನ್ಯಾಯ ಮಾಡದಿರಿ ಎಂದು ಮನವಿ ಸಲ್ಲಿಸಿದ್ದಾರೆ. ಆದರೆ ಮುಖ್ಯಮಂತ್ರಿಗಳು ಪರಿಷ್ಟ ಜಾತಿ ಮತ್ತು ವರ್ಗದ ಟೆಂಡರ್ ಮೊತ್ತ ಹೆಚ್ಚಳ ಮಾಡುವ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದರು.




