ಬೆಂಗಳೂರು: ಪ್ರಸ್ತುತ ವರ್ಷದ ಬೇಸಿಗೆಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯನ್ ಬಿಸಿಲು ಅಧಿಕವಾಗಿದ್ದರೆ, ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪ್ರಸ್ತುತ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇತೃತ್ವದ ಸಂಪುಟ ಉಪ ಸಮಿತಿ ಸಭೆ ನಡೆಸಿತು.
ಸಭೆಗೆ ಹವಾಮಾನ ಮುನ್ಸೂಚನೆ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಏಪ್ರಿಲ್-ಮೇ ತಿಂಗಳುಗಳಲ್ಲಿ ಉತ್ತಮ ಮಳೆಯಾಗಲಿದೆ. ಫೆಬ್ರವರಿ-ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ ಎಂದರು.
ಇದೇ ವೇಳೆ ರಾಜ್ಯಾದ್ಯಂತ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಕಂದಾಯ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.
ರಾಜ್ಯದಲ್ಲಿನ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ ಒಟ್ಟು 535.21 ಟಿ.ಎಂ.ಸಿ. ನೀರಿನ ಸಂಗ್ರಹಣೆಯಿದ್ದು, ಸರಾಸರಿ ನೀರಿನ ಸಂಗ್ರಹಣೆಯ ಶೇ.60 ರಷ್ಟು ಇದೆ. ಕಳೆದ ವರ್ಷ ಇದೇ ಸಮಯದಲ್ಲಿ 332.52 ಟಿ.ಎಂ.ಸಿ. ನೀರಿನ ಸಂಗ್ರಹಣೆ ಇತ್ತು ಎಂಬ ವಿಷಯವನ್ನು ಉಪಸಮಿತಿಯಲ್ಲಿ ಚರ್ಚಿಸಲಾಯಿತು.
ಕೆಲವೊಂದು ಜಲಾಶಯಗಳಲ್ಲಿ ನೀರಿನ ಮಟ್ಟ ತೃಪ್ತಿಕರವಾಗಿ ಇಲ್ಲದೆ ಇರುವ ಬಗ್ಗೆ ಅತಂಕ ವ್ಯಕ್ತಪಡಿಸಿದ ಸಚಿವರು, ಜಲಾನಯನ ಪ್ರದೇಶಗಳಲ್ಲಿನ ಬೆಳಗಳಿಗೆ ಅವಶ್ಯವಿರುವ ನೀರಿನ ಪ್ರಮಾಣ ಇತ್ಯಾದಿ ವಿಷಯಗಳನ್ನು ಗಮನದಲ್ಲಿರಿಸಿಕೊಂಡು ಮುಂಬರುವ ದಿನಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಯಾವ ಮಟ್ಟ ತಲುಪಲಿದೆ, ಅದರಿಂದಾಗಿ ಕುಡಿಯುವ ನೀರಿಗಾಗಿ ಲಭ್ಯವಾಗಲಿರುವ ನೀರಿನ ಪ್ರಮಾಣವೆಷ್ಟು? ಈ ಕುರಿತು ಮುಂದಿನ ಸಭೆಗಳಲ್ಲಿ ಸ್ಪಷ್ಟ ಮಾಹಿತಿ ನೀಡುವಂತೆ ಜಲಸಂಪ್ಮೂಲ ಇಲಾಖೆಗೆ ಸೂಚಿಸಿದರು.
ಕುಡಿಯುವ ನೀರಿಗೆ ಅವಶ್ಯವಿರುವ ನೀರನ್ನು ಕಾಯ್ದಿರಿಸಿದ ನಂತರವೇ ನೀರಾವರಿಗಾಗಿ ನೀರನ್ನು ಬಿಡುಗಡೆಗೊಳಿಸುವ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಹಾಗೂ ತಹಶೀಲ್ದಾರರುಗಳ ಪಿ.ಡಿ.ಖಾತೆಯಲ್ಲಿ 488.30 ಕೋಟಿಗಳ ಅನುದಾನ ಲಭ್ಯವಿದ್ದು. ಇದನ್ನು ಬಳಸಿ ತುರ್ತು ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದರು.




