ಬೆಂಗಳೂರು: ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್ ಮಹದೇವ ಎಂಬುವರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದ ಕನ್ನಡಪರ ಹೋರಾಟಗಾರರನ್ನು ಕೆರಳಿಸಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಕರ್ನಾಟಕ ರಕ್ಷಣಾ ವೇದಿಕೆಯ ವಿವಿಧ ಬಣಗಳ ಕಾರ್ಯಕರ್ತರು ರಾಜ್ಯದ ಅನೇಕ ಕಡೆ ಪ್ರತಿಭಟನೆ ನಡತೆ ಹಲ್ಲೆ ನಡೆಸಿದ ಎಂಇಎಸ್ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು ಮತ್ತು ಕರ್ನಾಟಕದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಶಿವರಾಮೇಗೌಡ ಬಣದ ಕಾರ್ಯಕರ್ತರು ಬೆಂಗಳೂರಿನ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೆಲಕಾಲ ರಸ್ತೆ ತಡೆ ಮಾಡಿದರು ಆನಂತರ ಎಂಇಎಸ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.
ಬೆಂಗಳೂರು ಹೊರವಲಯದ ಆನೇಕಲ್, ಮೈಸೂರು, ರಾಮನಗರದ ಬಿಡದಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಅನೇಕ ಕಡೆ ಪ್ರತಿಭಟನೆ ನಡೆಸಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಎಂಇಎಸ್ ಮತ್ತು ಬಸ್ಸಿನಲ್ಲಿ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಘಟನೆಯ ಬಗ್ಗೆ ಆಕೋಶ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಕರವೇ ಅಧ್ಯಕ್ಷ ನಾರಾಯಣ ಗೌಡ, ಇದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿ ಪೊಲೀಸರು ಮಹದೇವ ಅವರ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬನನ್ನೂ ಬಂಧಿಸಿ ಜೈಲಿಗೆ ಕಳುಹಿಸಬೇಕು. ಇಲ್ಲವಾದಲ್ಲಿ ಇದರ ಪರಿಣಾಮ ಭೀಕರವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕನ್ನಡಿಗರು ಸೌಹಾರ್ದಪ್ರಿಯರು, ಶಾಂತಿಪ್ರಿಯರು. ಹಾಗಂದ ಮಾತ್ರಕ್ಕೆ ನಮ್ಮ ಮೇಲೆ ವಿನಾಕಾರಣ ಹಲ್ಲೆ ನಡೆಸುವ ಭಾಷಾಂಧರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಕಿತ್ತುಕೊಳ್ಳಲು ನಡೆಸಿದ ಪ್ರಯತ್ನಗಳೆಲ್ಲ ವಿಫಲವಾದ ಮೇಲೆ ಹತಾಶರಾಗಿರುವ ಭಾಷಾಂಧ ಮರಾಠಿಪುಂಡರು ಈಗ ಕನ್ನಡಿಗರ ಮೇಲೆ ಕೈಮಾಡುವ ನೀಚ ಕೃತ್ಯಕ್ಕೆ ಇಳಿದಿದ್ದಾರೆ. ಪೊಲೀಸರು ಇವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಕನ್ನಡಿಗರ ಸಿಟ್ಟು ರಟ್ಟೆಗೆ ಬರುತ್ತದೆ. ಅಂಥ ಸಂಘರ್ಷಕ್ಕೆ ಎಡೆ ಮಾಡಿಕೊಡದೇ ಪುಂಡರನ್ನು ಮೊದಲು ಬಂಧಿಸಲಿ ಎಂದಿದ್ದಾರೆ.
ಕರ್ನಾಟಕದ ನೆಲದಲ್ಲಿ ಬದುಕುವವರು ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು. ಅದನ್ನು ಹೊರತುಪಡಿಸಿ ತಮ್ಮ ಭಾಷೆ ಕಲಿಯಿರಿ ಎಂದು ತಾಕೀತು ಮಾಡಿ ದೌರ್ಜನ್ಯ ನಡೆಸಲು ಹೊರಟರೆ ಅಂಥವರಿಗೆ ಕರ್ನಾಟಕ ರಕ್ಷಣಾ ವೇದಿಕೆ ತಕ್ಕ ಪಾಠ ಕಲಿಸಲಿದೆ. ಇದು ನನ್ನ ನೇರವಾದ ಎಚ್ಚರಿಕೆ ಎಂದಿದ್ದಾರೆ.




