ಬೆಂಗಳೂರು: ವಿದೇಶಿ ಹಾಗೂ ನಕಲಿ ಸಿಗರೇಟ್ ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಜಿಎಸ್ಟಿ ಹಾಗೂ ವಾಣಿಜ್ಯ ತೆರಿಗೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ಕೈಗೊಂಡು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ವಾಣಿಜ್ಯ ತೆರಿಗೆ ಇಲಾಖೆಯ ಬೆಂಗಳೂರು ದಕ್ಷಿಣ ವಲಯದ ರಾಜ್ಯ ಜಿಎಸ್ಟಿ ಜಾರಿ ಅಧಿಕಾರಿಗಳು ನಗರದ ಚಿಕ್ಕಪೇಟೆ, ಅವೆನ್ಯೂ ರಸ್ತೆ, ಮಾಮೂಲ್ ಪೇಟೆ, ಬನಶಂಕರಿ, ಬಿಟಿಎಂ ಕೋರಮಂಗಲ ಸೇರಿ ವಿವಿಧೆಡೆ ಅಕ್ರಮ ಮತ್ತು ನಕಲಿ ಸಿಗರೇಟ್ಗಳ ಹಲವು ದಿನಗಳಿಂದ ಮಾರಾಟದ ಬಗ್ಗೆ ಖಚಿತ ಮಾಹಿತಿಯ ಆಧರಿಸಿ ದಾಳಿ ನಡೆಸಿ ತಪಾಸಣೆ ಕೈಗೊಂಡಿದ್ದಾರೆ.
ದಾಳಿ ವೇಳೆ ಜಿಎಸ್ಟಿ ಜಾರಿ ಅಧಿಕಾರಿಗಳು ವಶಪಡಿಸಿಕೊಂಡ ವಿವಿಧ ವಿದೇಶಿ ಬ್ರಾಂಡ್ಗಳ ಸಿಗರೇಟ್ ಗಳನ್ನು ಜಿಎಸ್ ಟಿ ಅಧಿಕಾರಿಗಳು ರಾಜ್ಯ ಪೊಲೀಸರಿಗೆ ನೀಡಿ ಸಿಗರೇಟ್ ಮತ್ತು ಇತರೆ ತಂಬಾಕು ಪದಾರ್ಥಗಳ ನಿಯಂತ್ರಣ ಕಾಯಿದೆ ( ಕೋಟ್ಪಾ ) ಅಡಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.
ರಾಜ್ಯ ಜಿಎಸ್ಟಿ ಇಲಾಖೆಯ ಹೆಚ್ಚುವರಿ ಆಯುಕ್ತ ಚಂದ್ರಶೇಖರ ನಾಯಕ ನೇತೃತ್ವದ ರಾಜ್ಯ ಜಿಎಸ್ಟಿ ಅಧಿಕಾರಿಗಳು ಹಾಗೂ ವಾಣಿಜ್ಯ ತೆರಿಗೆಗಳ ಉಪ ಆಯುಕ್ತ ಭರತೇಶ್ ಕುಮಾರ್ ನೇತೃತ್ವದಲ್ಲಿ ತಪಾಸಣೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಜಿಎಸ್ ಟಿ ತೆರಿಗೆ ಇಲಾಖೆ ಭಾರತಕ್ಕೆ ಕಳ್ಳಸಾಗಣೆ ಮಾಡಲಾದ ಮತ್ತು ಜಿಎಸ್ ಟಿ ಪಾವತಿಗಳನ್ನು ತಪ್ಪಿಸುವಲ್ಲಿ ತೊಡಗಿಸಿಕೊಂಡವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ.




