ಬೆಂಗಳೂರು: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು, ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಸಿದ್ದರಾಮಯ್ಯ ಹೇಳಿದರು.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ. ಸೋಮಶೇಖರ್, ವಿವಿಧ ಮಠಾಧೀಶರಾದ ಮಲ್ಲಿಕಾರ್ಜುನ ಮರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಲಿಂಗಾಯತ ಮಠಾಧೀಶರು, ಸಚಿವರು, ಶಾಸಕರು, ಸಮಾಜದ ಮುಖಂಡರು ಸೋಮವಾರ ನೀಡಿದ ವಿವಿಧ ಬೇಡಿಕೆಗಳ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲವಾಗಿದೆ. ಅದರಂತೆಯೇ ಸರ್ಕಾರದ ಕೂಡ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು.
ಸಮಾಜದಲ್ಲಿ ಗಟ್ಟಿಯಾಗಿ ಬೇರೂರಿರುವ ಜಾತಿ ವ್ಯವಸ್ಥೆಗೆ ಪಟ್ಟಭದ್ರರು ನೀರು ಗೊಬ್ಬರ ಹಾಕುತ್ತಿದ್ದಾರೆ. ಅದಕ್ಕಾಗಿಯೇ ಜಾತಿವಾದಿಗಳಿಗೆ ಅವರ ವಿಚಾರಗಳು ಹಿಡಿಸುವುದಿಲ್ಲ. ಬಹಿರಂಗವಾಗಿ ವಿರೋಧಿಸಲು ಸಾಧ್ಯವಾಗದ ಕಾರಣ, ಆಂತರಿಕವಾಗಿ ವಿರೋಧಿಸುತ್ತಿದ್ದಾರೆ ಎಂದರು.
ಶರಣರ ಜನ್ಮಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ‘ಶರಣ ಸ್ಮಾರಕ ರಕ್ಷಣಾ ಪ್ರಾಧಿಕಾರ’ ರಚನೆ, ಬಸವತತ್ವ ಪ್ರಚಾರಕ್ಕೆ ₹500 ಕೋಟಿ ನೆರವು ಸೇರಿದಂತೆ ಲಿಂಗಾಯತ ಮಠಾಧೀಶರ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸಲಾಗುವುದು ಎಂದು ನಿಯೋಗಕ್ಕೆ ಭರವಸೆ ನೀಡಿದರು.
ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕವಾಗಿದೆ. ಬಸವಣ್ಣ ಅವರ ವಿಚಾರಗಳೇ ಅಂಬೇಡ್ಕರ್ ವಿಚಾರಗಳಾಗಿದ್ದು, ಸಂವಿಧಾನದಲ್ಲಿ ಅಡಕವಾಗಿವೆ ಎಂದರು.
ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರವನ್ನು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮ ಸರ್ಕಾರ. ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯವಿರುವುದನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದರು.
ಜಾತ್ಯತೀತ, ಸಮಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕವಾಗಿದೆ. ಗೋರುಚ ಅವರ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪವು ಮೊದಲ ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು ಎಂದರು.
ಮುಖ್ಯಮಂತ್ರಿ ಭೇಟಿಗೂ ಮೊದಲು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನಿವಾಸದಲ್ಲಿ ಮಠಾಧೀಶರು, ಸಮುದಾಯದ ಸಚಿವರು, ಶಾಸಕರು ಸಭೆ ನಡೆಸಿದರು.



