ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ವಿದ್ಯುತ್ ವಿತರಣಾ ಸಂಸ್ಥೆಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸಲಾಗುತ್ತಿದೆ. ಹೀಗಾಗಿ, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್ ಈ ವಿಷಯ ತಿಳಿಸಿದರು. ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕೆಇಆರ್ಸಿ ಎಸ್ಕಾಂಗಳಿಗೆ ಸೂಚಿಸಿದೆ ಎಂಬ ವಿಚಾರ ತಪ್ಪು ಕಲ್ಪನೆಯಿಂದ ಸೃಷ್ಟಿಯಾಗಿದೆ. ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ ಎಂದರು.
ಗೃಹಜ್ಯೋತಿ ಯೋಜನೆ ಘೋಷಣೆ ಸಂದರ್ಭದಲ್ಲೇ, ಗೃಹ ಬಳಕೆದಾರರಿಗೆ 200 ಯೂನಿಟ್ವರೆಗೆ ಉಚಿತವಾಗಿ ವಿದ್ಯುತ್ ಪೂರೈಸುವುದಾಗಿ ಸರ್ಕಾರ ಹೇಳಿತ್ತು. ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದಲೇ ಪಾವತಿ ಮಾಡುವುದಾಗಿಯೂ ಹೇಳಲಾಗಿತ್ತು. ಅದರಂತೆ ಬಜೆಟ್ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ. ಫೆಬ್ರವರಿ 2025ರವರೆಗಿನ ಗೃಹಜ್ಯೋತಿ ಯೋಜನೆ ಸಹಾಯಧನವನ್ನು ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ಪಾವತಿಸಲಾಗಿದೆ ಎಂದರು.
ಕೆಇಆರ್ ಸಿ (ಸಹಾಯಧನ ಪಾವತಿ ವಿಧಾನ) ನಿಯಮ 2008ರಲ್ಲಿ ವಿದ್ಯುತ್ ಯೋಜನೆಗಳ ಸಹಾಯಧನವು ರಾಜ್ಯ ಸರ್ಕಾರದಿಂದ ಮುಂಗಡವಾಗಿ ಪಾವತಿಯಾಗದಿದ್ದರೆ ಗ್ರಾಹಕರಿಂದ ಪಡೆಯಲು ಎಸ್ಕಾಂಗಳಿಗೆ ಅವಕಾಶ ಕಲ್ಪಿಸುತ್ತದೆ. ಈ ಸಾಮಾನ್ಯ ನಿಯಮವನ್ನೇ ತಪ್ಪಾಗಿ ಗ್ರಹಿಸಲಾಗಿದೆ ಎಂದರು.
ಗೃಹಜ್ಯೋತಿ ಯೋಜನೆ ಜಾರಿಯಾದಾಗಿನಿಂದ ಎಸ್ಕಾಂಗಳಿಗೆ ಮುಂಗಡವನ್ನು ಪಾವತಿಸಲಾಗುತ್ತಿದೆ. ಹೀಗಾಗಿ, ಗ್ರಾಹಕರಿಂದ ಯೋಜನೆ ಹಣ ಪಡೆಯುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಸಬ್ಸಿಡಿ ಮೊತ್ತವನ್ನು ಗ್ರಾಹಕರಿಂದ ಪಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. 200 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಯಾವುದೇ ಗೊಂದಲವಿಲ್ಲದೆ ಮುಂದುವರಿಸಿಕೊಂಡು ಹೋಗಲು ಇಂಧನ ಇಲಾಖೆ ಬದ್ಧವಾಗಿದೆ ಎಂದರು.




