Indian National Congress – Karnataka ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು, ಪ್ರತೀ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಮುಖ್ಯಮಂತ್ರಿಗಳು ಹಾಗು ಹಣಕಾಸು ಸಚಿವರು ಆಗಿರುವ ಶ್ರೀ Siddaramaiah ನವರು ₹4 ಲಕ್ಷ ಕೋಟಿ ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ಆದರೆ ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ “ಮ್ಯಾಜಿಕ್” ಆಗಿ ಹಣ ಜಮವಾಗುತ್ತದೆ!
ಪ್ರತಿ ಬಾರಿಯೂ ತಾಂತ್ರಿಕ ಸಮಸ್ಯೆಯ ನೆಪ ಒಡ್ಡುವುದು ನಿಜಕ್ಕೂ ಹಾಸ್ಯಾಸ್ಪದವಾಗಿದೆ. ಬೆಂಗಳೂರು, ಭಾರತದ ಸಿಲಿಕಾನ್ ಕ್ಯಾಪಿಟಲ್, ಜಾಗತಿಕ ತಂತ್ರಜ್ಞಾನ ಕೇಂದ್ರದಲ್ಲಿ DBT ವರ್ಗಾವಣೆ ಸರಿಪಡಿಸಲಾಗುವುದಿಲ್ಲವೇ?
ಮುಂಬರುವ ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಕ್ಯಾಲೆಂಡರ್ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ, ಸಮಯಕ್ಕೆ ಸರಿಯಾಗಿ DBT ವರ್ಗಾವಣೆ ಖಚಿತಪಡಿಸಬೇಕೆಂದು ಒತ್ತಾಯಿಸುತ್ತೇನೆ.
ವಿಳಂಬ ಸಾಕು, ಕಾರಣ ಬೇಡ, ಕಟಾ ಕಟ್ ಹಣ ವರ್ಗಾಯಿಸಿ!
– ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ನಾಯಕ



