ಬೆಂಗಳೂರು: 83ನೇ ಹುಟ್ಟುಹಬ್ಬದ ಆಚರಿಸಿಕೊಳ್ಳುವ ಮೂಲಕ ಸಂಭ್ರಮದಲ್ಲಿರುವ ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದಾರೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಮತ್ತೆ ಪಕ್ಷ ಅಧಿಕಾರಕ್ಕೆ ತರುವ ಕೆಲಸ ಮಾಡಿ, ಪಕ್ಷ ಬಲಪಡಿಸ್ತೇವೆ. ಸೂರ್ಯ ಚಂದ್ರರಷ್ಟೇ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಎಂದರು.
ಪಕ್ಷದ ಮುಖಂಡರು ಮತ್ತು ಕುಟುಂಬ ಸದಸ್ಯರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದ ಆವರು ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿಯಲ್ಲಿ ಎಲ್ಲರೂ ಒಂದಾಗಿ ಒಟ್ಟಾಗಿ ಹೋರಾಟ ಮಾಡುವ ಮೂಲಕ ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದರು.
ನನಗೆ ಇವತ್ತು 82 ತುಂಬಿ 83 ನೇ ವರ್ಷಕ್ಕೆ ಕಾಲಿಟ್ಟಿದ್ದೇನೆ. ರಾಜ್ಯಾದ್ಯಂತ ಅಭಿಮಾನಿಗಳು ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರ ಮಾಡಿ ಶುಭ ಕೋರಿದ್ದಾರೆ. ಅವರೆಲ್ಲರಿಗೂ ಒಳ್ಳೇದಾಗಲಿ.ನನಗೆ ರಾಜ್ಯದಲ್ಲಿ ಅನೇಕ ಸ್ಥಾನಮಾನ ನೀಡಿ ಸಿಎಂ ಆಗಿ ಕೆಲಸ ಮಾಡುವ ಸೌಭಾಗ್ಯ ರಾಜ್ಯದ ಜನ ಕೊಟ್ಟಿದ್ದಾರೆ ಎಂದರು.
ಪ್ರತೀ ಜಿಲ್ಲೆಯಲ್ಲೂ ಕಾರ್ಯಕರ್ತರ ಸಮಾವೇಶ ಮಾಡಿ ಅವರನ್ನು ಹುರಿದುಂಬಿಸುವ ಕೆಲಸ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರ ತೊಲಗಿಸುವ ಕೆಲಸ ಮಾಡಿ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಶಕ್ತಿ ಮೀರಿ ಎಲ್ಲೂ ಕೆಲಸ ಮಾಡುವುದಾಗಿ ಘೋಷಿಸಿದರು.
ಈ ವೇಳೆ ಉಪಸ್ಥಿತರಿದ್ದ ಸಂಸಧ ಬಸವರಾಜ ಬೊಮ್ಮಯಿ ಮಾತನಾಡಿ, ರಾಜ್ಯದಲ್ಲಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ ಹಲವು ಹೋರಾಟಗಳ ಮೂಲಕ ಅಧಿಕಾರಕ್ಕೆ ಬಂದರು. ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಸಮುದಾಯಗಳಿಗೂ ಕಾರ್ಯಕ್ರಮ ಕೊಟ್ಟರು ಎಂದರು.
ಕೆಳಸ್ತರವರಿಗೆ, ಬಡವರಿಗೆ, ಮಹಿಳೆಯರು, ಮಕ್ಕಳಿಗೆ, ರೈತರಿಗೆ ಕಾರ್ಯಕ್ರಮ ನೀಡಿದ್ದರಿಂದಲೇ ಜನ ಯಡಿಯೂರಪ್ಪ ಅವರ ಕಾರ್ಯಕ್ರಮಗಳನ್ನು ಬಯಸುತ್ತಿದ್ದಾರೆ.ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ಮತ್ತೆ ಪಕ್ಷ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದರು.
ವಿಧಾನಸಭೆಯ ವಿಪಕ್ಷದ ನಾಯಕ ಆರ್ ಅಶೋಕ್ ಮಾತನಾಡಿ, ದಕ್ಷಿಣ ಭಾರತದಲ್ಲಿ ಬಿಜೆಪಿ ಕಟ್ಟಿ ಅಧಿಕಾರಕ್ಕೆ ಬರುವಂತೆ ಮಾಡಿದ್ದಾರೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹೋರಾಟ ಆರಂಭ ಮಾಡಲಿದ್ದಾರೆ. ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಅಧಿಕಾರಕ್ಕೆ ತರುತ್ತೇವೆ ಎಂದರು ಬಿಜೆಪಿಯಲ್ಲಿ ಲಿಂಗಾಯತ ಸಮರ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ಎಸ್. ಆರ್ ವಿಶ್ವನಾಥ್ ಅವರು, ಶಾಸಕ ಯತ್ನಾಳ್ ಗೆ ತಿರುಗೇಟು ನೀಡಿದರು.
ವೀರಶೈವ ಲಿಂಗಾಯತರ ನಾಯಕ ಯಾರು ಎಂದು ಮಠಾಧೀಶರು, ಸಮುದಾಯದ ಹಿರಿಯರು ತೀರ್ಮಾನ ಮಾಡಲಿದ್ದಾರೆ. ಯಾವತ್ತೂ ಲಿಂಗಾಯತರ ನಾಯಕ ಯಡಿಯೂರಪ್ಪ ಅವರೇ ಎಂದರು.
ಯಾರೋ 40-50 ಜನರನ್ನ ಸೇರಿಸಿ ಲಿಂಗಾಯತ ನಾಯಕ ಅಂದರೆ ಆಗಲ್ಲ. ನಾನೂ ಒಕ್ಕಲಿಗ ಮುಖಂಡರನ್ನ ಸೇರಿಸಿ ನಾಯಕ ಅಂದರೆ ಆಗುತ್ತಾ? ಕುರುಬರಿಗೆ ಸಿದ್ದರಾಮಯ್ಯ ನಾಯಕ ಹೇಗೋ ಹಾಗೇ ವೀರಶೈವ ಲಿಂಗಾಯತರಿಗೆ ಯಡಿಯೂರಪ್ಪ ನಾಯಕ ಯತ್ನಾಳ್ ಸಮುದಾಯದ ಒಂದು ಭಾಗ ಅಷ್ಟೇ ಎಂದರು.




