ಬೆಂಗಳೂರು: ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್‌ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಿನಿಮಾ ಶೂಟಿಂಗ್ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ಅವಕಾಶ ಕಲ್ಪಿಸಿದೆ. ಆದರೆ ವಿದೇಶ ಪ್ರಯಾಣಕ್ಕೆ ಇವರು ಕೋರಿದ್ದ ಮನವಿಯನ್ನು ತಿರಸ್ಕರಿಸಿದೆ.
ಸಿನಿಮಾ ನಟನಾಗಿದ್ದು ಚಿತ್ರೀಕರಣಕ್ಕಾಗಿ ಬೆಂಗಳೂರು ಬಿಟ್ಟು ಬೇರೆಡೆ ಹೋಗಲು ಅವಕಾಶ ನೀಡಬೇಕು ಎಂದು ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಜಾಮೀನು ನೀಡಿದ್ದ ವೇಳೆ ವಿಧಿಸಲಾಗಿದ್ದ ಹಲವು ಷರತ್ತುಗಳನ್ನು ಸಡಿಲಿಸಿದ್ದು, ದರ್ಶನ್ ದೇಶದೊಳಗೆ ಎಲ್ಲಿಗೆ ಬೇಕಾದರೂ ಹೋಗಬಹುದು ಎಂದು ಆದೇಶಿಸಿದ್ದಾರೆ.
ಇದೇ ವೇಳೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರಿಗೆ ಕೆಲಸದ ನಿಮಿತ್ತ ಮುಂಬಯಿ ಹಾಗೂ ಹೊಸದಿಲ್ಲಿಗೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. ಪವಿತ್ರಾ ಗೌಡ ಪರ ವಕೀಲರು ಸಲ್ಲಿಸಿದ ಅರ್ಜಿ ಮಾನ್ಯ ಮಾಡಿದ ನ್ಯಾಯಾಲಯ, ಮಾರ್ಚ್ 3ರಿಂದ 10 ಹಾಗೂ ಮಾರ್ಚ್ 17ರಿಂದ 26ರವರೆಗೆ ಮುಂಬಯಿ, ದಿಲ್ಲಿಗೆ ತೆರಳಲು ಅನುಮತಿ ನೀಡಿದೆ.
ದರ್ಶನ್ ಅವರು ಇಂದಿನಿಂದ ‘ಡೆವಿಲ್’ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿ ಆಗಲಿದ್ದಾರೆ ಎಂದು ಸುದ್ದಿ ಹರಡಿತ್ತು. ಆದರೆ ದರ್ಶನ್ ಅವರಿಗೆ ಬೆನ್ನು ನೋವು ಬಹುವಾಗಿ ಕಾಡುತ್ತಿದೆ. ಹೀಗಾಗಿ, ಇದಕ್ಕೆ ಅವರು ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನು ನೋವು ಪೂರ್ಣ ಗುಣಮುಖವಾದ ಬಳಿಕವಷ್ಟೆ ಅವರು ಚಿತ್ರೀಕರಣಕ್ಕೆ ಹೋಗಲಿದ್ದಾರೆ ಎಂದು ಅವರ ಆಪ್ತ ಬಳಗದಿಂದ ತಿಳಿದುಬಂದಿದೆ.




