ಬೆಂಗಳೂರು: ರಾಜ್ಯದ ಅಭಿವೃದ್ಧಿ ಕುಂಠಿತವಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 120 ರಿಂದ 150 ಕೋಟಿ ರೂ. ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಲಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ
- ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳ ಪಟ್ಟಿ
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
ಬಿಜೆಪಿ ಶಾಸಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕಳೆದೆರಡು ವರ್ಷಗಳಲ್ಲಿ ಬೆಂಗಳೂರಿನಲ್ಲಾಗಿರುವ ಮಳೆ ಹಾನಿ, ರಸ್ತೆ ಗುಂಡಿ, ಕಾಮಗಾರಿ ಸ್ಥಗಿತ, ಉದ್ಯಾನಗಳಲ್ಲಿ ಸಿಬ್ಬಂದಿಗೆ ವೇತನ ವಿಳಂಬ ಮೊದಲಾದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಚರ್ಚಿಸಲಾಗಿದೆ. ಬೆಂಗಳೂರಿನ ಅಭಿವೃದ್ಧಿ ಕುಂಠಿತವಾಗಿ ಜನರು ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಬೆಲೆ ಏರಿಕೆಯ ಹೊರೆಯನ್ನು ಜನರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಆದ್ದರಿಂದ ಬೆಂಗಳೂರಿಗೆ ಹೆಚ್ಚು ಅನುದಾನ ನೀಡಿ ಎಂದು ಆಗ್ರಹಿಸಲಾಗಿದೆ ಎಂದರು.
ರಾಜ್ಯದ ಬಿಜೆಪಿ ಶಾಸಕರು ಹಾಗೂ ಉತ್ತರ ಕರ್ನಾಟಕದ ಶಾಸಕರು ಕಣ್ಣೀರು ಹಾಕುತ್ತಿದ್ದಾರೆ. ಅಭಿವೃದ್ಧಿಗಾಗಿ ಶಾಸಕರಿಗೆ ಅನುದಾನ ಮಂಜೂರು ಮಾಡಬೇಕು. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವಿದ್ದಾಗ ತಾರತಮ್ಯವಿಲ್ಲದೆ ನೂರಾರು ಕೋಟಿ ರೂ. ಅನುದಾನ ನೀಡಲಾಗಿತ್ತು. ಈಗ ತಾರತಮ್ಯ ಏಕೆ ಮಾಡಲಾಗುತ್ತಿದೆ ಎಂದು ಪ್ರಶ್ನೆ ಮಾಡಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 120-150 ಕೋಟಿ ರೂ. ಅನುದಾನ ನೀಡಿ ಎಂದು ಕೇಳಿದ್ದೇವೆ. ಅನುದಾನ ನೀಡಿದರೆ ಶಾಸಕರು ಎರಡು ವರ್ಷ ಉತ್ತಮವಾಗಿ ಕೆಲಸ ಮಾಡಬಹುದು ಎಂದರು.
ಕೇವಲ ಬಿಜೆಪಿ ಮಾತ್ರವಲ್ಲದೆ, ಅಭಿವೃದ್ಧಿ ಬಗ್ಗೆ ಜನರೇ ಹೇಳುತ್ತಿದ್ದಾರೆ. ಮೆಟ್ರೊ ದರ ಏರಿಕೆಯ ವಿರುದ್ಧ ಜನರೇ ಪ್ರತಿಭಟನೆ ಮಾಡಿದ್ದಾರೆ. ಬಜೆಟ್ ಅಧಿವೇಶನದಲ್ಲಿ ನಾವ್ಯಾರೂ ಅಡ್ಡಿ ಮಾಡದೆ ಎಲ್ಲಕ್ಕೂ ಸಹಕಾರ ನೀಡುತ್ತೇವೆ. ಆದರೆ ಸರಿಯಾಗಿ ಅನುದಾನ ನೀಡಲಿ ಎಂದರು.




