ಧಾರವಾಡ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ನೌಕರರು ವರ್ಷದ ಬಹುತೇಕ ಎಲ್ಲಾ ದಿನಗಳಲ್ಲಿ ಕೆಲಸದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಾರೆ. ಅದರಲ್ಲಿ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಿದಲ್ಲಿ ನೌಕರರಿಗೆ ಒತ್ತಡದ ಜೀವನದಿಂದ ಸ್ವಲ್ಪ ವಿಶ್ರಾಂತಿ ನೀಡಿದಂತಾಗುತ್ತದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಹೇಳಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ 2024-25 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಹಬ್ಬದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಟದಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಇಲ್ಲಿ ಸೇರಿದಂತಹ ಎಲ್ಲ ವೃಂದದ ನೌಕರರು ಆಟಗಳಲ್ಲಿ ಭಾಗವಹಿಸಬೇಕು. ಮತ್ತು ಕ್ರೀಡಾಕೂಟದಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾದ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳನ್ನು ಆಯೋಜಿಸಲಾಗಿದೆ ಎಂದರು.
ಶನಿವಾರ ಮಾರ್ಚ್ 1 ರಂದು ಸಂಜೆ 6 ಗಂಟೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ನೌಕರರಿಂದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಲಾಖೆಯ ಪ್ರತಿ ಸಿಬ್ಬಂದಿಯೂ ಸಂತೋಷ ಮತ್ತು ಉತ್ಸಾಹದಿಂದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಹಬ್ಬಕ್ಕೆ ಸಕ್ರೀಯವಾಗಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.
ಕ್ರೀಡಾಕೂಟವನ್ನು ಉದ್ಘಾಟಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಮಾತನಾಡಿ, ಕ್ರೀಡೆಯಲ್ಲಿ ಎಲ್ಲರೂ ಭಾಗವಹಿಸುವುದು ಅತಿ ಮುಖ್ಯ. ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಸರ್ಕಾರಿ ನೌಕರರು ತಮ್ಮ ಕರ್ತವ್ಯದೊಂದಿಗೆ ಕ್ರೀಡೆ, ಯೋಗ, ಹಾಗೂ ವ್ಯಾಯಾಮಗಳಿಗೆ ಸಮಯ ಕೊಡುವುದು ಅತೀ ಮುಖ್ಯವಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಎಲ್ಲ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರ ನೇತೃತ್ವದಲ್ಲಿ ಪಥಸಂಚಲನಾ ಕಾರ್ಯಕ್ರಮ ನೇರವೇರಿಸಿದರು.
ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮೂಗನೂರಮಠ ಅವರು ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಐ.ಎ.ಎಸ್ ಅಧಿಕಾರಿ ಗರೀಮಾ ಪನ್ವಾರ, ಧಾರವಾಡ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಎಸ್.ಎಫ್.ಸಿದ್ಧನಗೌಡರ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥಸ್ವಾಮಿ ಜಿಲ್ಲಾ ಪಂಚಾಯತ ಎಲ್ಲ ಹಿರಿಯ ಅಧಿಕಾರಿಗಳು, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ವಿವಿಧ ವೃಂದದ ನೌಕರರ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಗಳ ಅಭಿವೃದ್ಧಿ ಅಧಿಕಾರಿಗಳು ಮತ್ತು ಎಲ್ಲ ವೃಂದದ ನೌಕರರು ಹಾಜರಿದ್ದರು.



