ಧಾರವಾಡ: ದ್ವಿತೀಯ ಪಿಯುಸಿ ಪರೀಕ್ಷೆ ಸುಗಮವಾಗಿ ನಡೆಯುತ್ತಿರುವ ಬಗ್ಗೆ ನಗರದ ಕಿಟಲ್ ವಿಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ಆರ್.ಎಲ್.ಎಸ್ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭುವನೇಶ ಪಾಟೀಲ ಭೇಟಿ ನೀಡಿ, ಪರಿಶೀಲಿಸಿದರು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಪರೀಕ್ಷಾ ಪ್ರಕ್ರಿಯೆ ನಿರ್ವಹಣೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸುತ್ತಿರುವುದನ್ನು ವೀಕ್ಷಿಸಿದರು. ಪರೀಕ್ಷೆಗಳ ಕುರಿತಾಗಿ ನಿಯೋಜಿತ ಪರೀಕ್ಷಾ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು.
ಪರೀಕ್ಷಾ ಹಾಜರಾತಿ: ದ್ವಿತೀಯ ಪಿಯುಸಿ ಗಣಿತ ಪರೀಕ್ಷೆಗೆ ಒಟ್ಟು 12,755 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 12755 ವಿದ್ಯಾರ್ಥಿಗಳು ಇಂದು ನಡೆದ ಪರೀಕ್ಷೆಗೆ ಹಾಜರಾಗಿದ್ದರು, 83 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಒಟ್ಟಾರೆ ನೋಂದಾಯಿತ ವಿದ್ಯಾರ್ಥಿಗಳಲ್ಲಿ ಶೇ. 99.35 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ವ್ಯವಹಾರ ಅಧ್ಯಯನ ಪರೀಕ್ಷೆಗೆ ಒಟ್ಟು 7,493 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 7,289 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, 204 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಒಟ್ಟಾರೆ ನೋಂದಾಯಿತ ವಿದ್ಯಾರ್ಥಿಗಳಲ್ಲಿ ಶೇ. 97.27 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಶಿಕ್ಷಣಶಾಸ್ತ್ರ ಪರೀಕ್ಷೆಗೆ ಒಟ್ಟು 1,299 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 1,253 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, 46 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಒಟ್ಟಾರೆ ನೋಂದಾಯಿತ ವಿದ್ಯಾರ್ಥಿಗಳಲ್ಲಿ ಶೇ. 96.45 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.



