ಉಡುಪಿ: ಪೊಲೀಸರ ಕಣ್ಣಿಗೆ ಮಣ್ಣೆರೆಚಿ ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗ್ನ ಸದಸ್ಯನ ಬೆನ್ನು ಹತ್ತಿದ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಆತನ ಹೆಡೆಮುರಿ ಕಟ್ಟಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕುಖ್ಯಾತ ಗರುಡ ಗ್ಯಾಂಗ್ನ ಖತರ್ನಾಕ್ ಸದಸ್ಯ ಇಸಾಕ್ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಖದೀಮನಾಗಿದ್ದಾನೆ.
ಪ್ರಕರಣವೊಂದರ ಸಂಬಂಧ ಆರೋಪಿಯನ್ನು ಬಂಧಿಸಲು ನೆಲಮಂಗಲ ಪೊಲೀಸರು ಉಡುಪಿಗೆ ಬಂದಿದ್ದರು. ತನ್ನನ್ನು ಬಂಧಿಸಲು ಬಂದ ಪೊಲೀಸರನ್ನು ಕಂಡು ಆತ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ. ಆರೋಪಿಯನ್ನ ಬೆಂಬಿಡದೆ ಚೇಸ್ ಮಾಡಿದ ನೆಲಮಂಗಲ ಪೊಲೀಸರು, ಮಣಿಪಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಕಾರ್ಯಾಚರಣೆ ಕೈಗೊಂಡ ಮಣಿಪಾಲ್ ಪೊಲೀಸ್ ಇನ್ಸ್ಪೆಕ್ಟರ್ ದೇವರಾಜ್ ಮತ್ತವರ ಸಿಬ್ಬಂದಿ ಆರೋಪಿಯನ್ನು ಬೆನ್ನತ್ತಿದ್ದಾರೆ. ಈ ವೇಳೆ, ಆತ ತನ್ನ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋಗುವಾಗ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಾಲ್ಕು ಕಾರು ಹಾಗೂ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಆದರೂ ಕಾರನ್ನು ನಿಲ್ಲಿಸದೆ ಹೋಗುತ್ತಿದ್ದ ಆತನನ್ನು ಬೆನ್ನು ಹತ್ತಿ ಮಣ್ಣ ಪಳ್ಳದ ಬಳಿ ಬಂಧಿಸಿದ್ದಾರೆ.
ಕಾರಿನಲ್ಲಿ ಆರೋಪಿ ಜೊತೆ ಓರ್ವ ಯುವತಿ ಪತ್ತೆಯಾಗಿದ್ದಾಳೆ. ಮಣಿಪಾಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.




