ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದವರಿಗೆ ನೀಡಿರುವಂತೆ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಹೊಸ ವಿವಾದ ಸೃಷ್ಟಿಯಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ರಾಜ್ಯ ಸರ್ಕಾರದ ಈ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಈ ಓಲೈಕೆ ರಾಜಕಾರಣದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸುವ ಎಚ್ಚರಿಕೆ ನೀಡಿದೆ.
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಟಿಪಿ)ಕಾಯ್ದೆ ಸೆಕ್ಷನ್ 6ಕ್ಕೆ ತಿದ್ದುಪಡಿ ತರುವ ಮೂಲಕ ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇಕಡ ನಾಲ್ಕರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆ ಸಿದ್ಧಗೊಂಡಿದ್ದು ಕಾಯಿದೆ ತಿದ್ದುಪಡಿಗೆ ಸಜ್ಜುಗೊಂಡಿದೆ.
ಆರ್ಥಿಕ ಇಲಾಖೆ ತಿದ್ದುಪಡಿ ಮಸೂದೆಯ ಕರಡು ಸಿದ್ಧಪಡಿಸಿದ್ದು, ಅದಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಅನುಮೋದನೆ ನೀಡಿದೆ.
ಇದರ ವಿರುದ್ಧ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತಂತೆ ಹೇಳಿಕೆ ನೀಡಿರುವ ಪಕ್ಷದ ಅಧ್ಯಕ್ಷ ವಿಜಯೇಂದ್ರ, ಬಾಯಲ್ಲಿ ಸರ್ವ ಜನಾಂಗದ ಶಾಂತಿಯ ತೋಟದ ಮಂತ್ರ, ಸಂಪನ್ಮೂಲದ ಪಾಲಿನಲ್ಲಿ ನಿರಂತರ ಪಕ್ಷಪಾತ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರದ ಕಣ್ಣಿಗೆ ಅಲ್ಪಸಂಖ್ಯಾತರು ಎಂದರೆ ಮುಸ್ಲಿಮರು ಮಾತ್ರ ಕಾಣುತ್ತಾರೆಯೇ ಹೊರತೂ ಇತರ ನೈಜ ಅಲ್ಪಸಂಖ್ಯಾತ ಸಮುದಾಯಗಳಾವುವು ಕಣ್ಣಿಗೆ ಕಾಣುವುದೇ ಇಲ್ಲ. ಮತಬ್ಯಾಂಕ್ ಹೆಸರಿನಲ್ಲಿ ಮುಸ್ಲಿಮರಿಗೆ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಧರ್ಮದ ಹೆಸರಿನಲ್ಲಿ ಉದ್ಯೋಗ ಹಾಗೂ ಶೈಕ್ಷಣಿಕ ಮೀಸಲಾತಿ ನೀಡಲಾಗಿದೆ. ಇದೀಗ ಸರ್ಕಾರಿ ಕಾಮಗಾರಿಗಳಲ್ಲೂ ಶೇ 4ರಷ್ಟು ಮೀಸಲಾತಿ ಕಲ್ಪಿಸಲು ಮುಂದಾಗಿ ನಿಯಮ ರೂಪಿಸಲು ಹೊರಟಿದೆ ಎಂದು ಹೇಳಿದ್ದಾರೆ.




