ಬೆಂಗಳೂರು: ಹೈಕೋರ್ಟ್ ಆದೇಶದ ಮಾದರಿಯಲ್ಲಿ ನಕಲಿ ಆದೇಶಗಳನ್ನು ಸೃಷ್ಟಿ ಮಾಡಿ ಲಕ್ಷಾಂತರ ರೂ ಹಣ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಕುಣಿಗಲ್ ಮೂಲದ ವಿಜೇತ್, ಲೋಹಿತ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಹೈಕೋರ್ಟ್ ನೀಡುವ ಆದೇಶದ ಪ್ರತಿಯ ರೀತಿ ನಕಲಿ ಆದೇಶ ಪ್ರತಿ ತಯಾರಿಸುತ್ತಿದ್ದರು. ಅದನ್ನು ಬಳಸಿಕೊಂಡು ಅನೇಕರನ್ನು ವಂಚಿಸಿದ್ದರು.
ಒಬ್ಬ ಆರೋಪಿಯಂತೂ, ಇಂತಹ ಆದೇಶದ ಮೂಲಕ ತನ್ನ ಪ್ರೇಯಸಿಯ ಸ್ನೇಹಿತನನ್ನೇ ವಂಚಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಆರೋಪಿ ವಿಜೇತ್, ಜಾರಿ ನಿರ್ದೇಶನಾಲಯ (ಇಡಿ) ಹಣ ಮುಟ್ಟುಗೋಲು ಹಾಕಿಕೊಂಡ ಪ್ರಕರಣವೊಂದಕ್ಕೆ ಸಂಬಂಧಿಸಿದ್ದು ಎಂಬ ನಂಬಿಕೆ ಬರುವ ರೀತಿಯಲ್ಲಿ ಹೈಕೋರ್ಟ್ ಆದೇಶವನ್ನೇ ಹೋಲುವಂತೆ ನಕಲಿ ಆದೇಶ ಪ್ರತಿ ತಯಾರಿಸಿದ್ದ.
ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯ ಒಂದು ಕೋಟಿ ರೂ.ಗೂ ಹೆಚ್ಚು ಹಣವನ್ನು ಮುಟ್ಟುಗೋಲು ಹಾಕಿಕೊಂಡಿದೆ. ಆದರೆ, ಹೈಕೋರ್ಟ್ ತಮ್ಮ ಪರ ತೀರ್ಪು ನೀಡಿದ್ದು, ಸೀಜ್ ಮಾಡಿದ ಹಣವನ್ನು ಜಾರಿ ನಿರ್ದೇಶನಾಲಯ ನಮಗೆ ನೀಡಬೇಕಿದೆ. ಆ ಹಣವನ್ನು ಬಿಡಿಸಿಕೊಳ್ಳಲು ಸ್ವಲ್ಪ ಹಣ ಬೇಕಾಗಿದೆ. ಮೊತ್ತ ಕೈಸೇರಿದ ಕೂಡಲೇ ಹಿಂದಿರುಗಿಸುವುದಾಗಿ ಆರೋಪಿಗಳು ಜನರನ್ನು ವಂಚಿಸುತ್ತಿದ್ದರು.
ಹೈಕೋರ್ಟ್ ಆದೇಶವನ್ನೇ ಹೋಲುವ ನಕಲಿ ಪ್ರತಿ ತಯಾರಿಸಿ ಜನರಲ್ಲಿ ನಂಬಿಕೆ ಬರುವಂತೆ ಮಾಡಿ ಹಣ ಪೀಕುತ್ತಿದ್ದರು ಎಂಬುದು ವಿಚಾರಣೆ ವೇಳೆ ಬಹಿರಂಗವಾಗಿದೆ.
ಆರೋಪಿಗಳು ನಮಗೆ ಇಡಿ ಅಧಿಕಾರಿಗಳಿಂದ ಕೋಟ್ಯಂತರ ರೂ. ಬಿಡುಗಡೆ ಆಗಬೇಕಿದೆ. ಅದಕ್ಕೆ ಹೈಕೋರ್ಟ್ ಆದೇಶ ಕೂಡ ಮಾಡಿದೆ. ಆದರೆ, ಈಗ ನನಗೆ ಇದನ್ನು ಬಿಡಿಸಿಕೊಳ್ಳಲು ಹಣ ಕಟ್ಟಬೇಕಿದೆ. ಇಡಿ ಕೊಟ್ಟ ಬಳಿಕ ಹಣ ವಾಪಸ್ ಕೊಡುವುದಾಗಿ ಹೇಳಿ ನಂಬಿಸಿದ್ದರು. ಇದನ್ನು ನಂಬಿ ಹಣ ಕೊಟ್ಟ ಮೂವರಿಗೆ ವಂಚನೆ ಎಸಗಿದ್ದರು. ಸುಮಾರು 70 ಲಕ್ಷ ರೂಗೂ ಹೆಚ್ಚಿನ ಹಣ ಪಡೆದು ವಂಚಿಸಿದ್ದರು. ವಿಧಾನಸೌಧ ಪೊಲೀಸರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.




