ಬಳ್ಳಾರಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ಓಎಂಎಸ್ಎಸ್(ಡಿ) ಯೋಜನೆಯಡಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಮಾರ್ಚ್-2025 ಮಾಹೆಗೆ ಪಡಿತರ ವಿತರಣೆ ಮಾಡಲಾಗುತ್ತಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಅಂತ್ಯೋದಯ ಪಡಿತರ ಚೀಟಿಗಳಿಗೆ ಫೆಬ್ರವರಿ ಮತ್ತು ಮಾರ್ಚ್-2025 ರ ಮಾಹೆ ಸೇರಿ 01 ರಿಂದ 03 ಸದಸ್ಯರಿರುವ ಕುಟುಂಬಕ್ಕೆ 35 ಕೆಜಿ ಅಕ್ಕಿ, 04 ಸದಸ್ಯರಿರುವ ಕುಟುಂಬಕ್ಕೆ 45 ಕೆಜಿ, 05 ಸದಸ್ಯರಿರುವ ಕುಟುಂಬಕ್ಕೆ 55 ಕೆಜಿ, 06 ಸದಸ್ಯರಿರುವ ಕುಟುಂಬಕ್ಕೆ 65 ಕೆಜಿ, 07 ಸದಸ್ಯರಿರುವ ಕುಟುಂಬಕ್ಕೆ 75 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.
ಬಿಪಿಎಲ್ ಪಡಿತರ ಚೀಟಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ಓಎಂಎಸ್ಎಸ್(ಡಿ) ಯೋಜನೆಯಡಿ ಫೆಬ್ರವರಿ ಮತ್ತು ಮಾರ್ಚ್-2025 ರ ಮಾಹೆ ಸೇರಿ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.
ಅಂತರ್ ರಾಜ್ಯ/ಅಂತರ್ ಜಿಲ್ಲೆ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಒಂದು ವೇಳೆ ನ್ಯಾಯಬೆಲೆ ಅಂಗಡಿಯವರು ಕಡಿಮೆ ಪ್ರಮಾಣ ವಿತರಿಸಿದಲ್ಲಿ ಉಚಿತ ದೂರವಾಣಿ ಸಂಖ್ಯೆ: 1967 ಅಥವಾ ತಹಶೀಲ್ದಾರ ಕಚೇರಿ ಮತ್ತು ಉಪನಿರ್ದೇಶಕರ ಕಚೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು.




