ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು ಪೊಲೀಸರು ನಡೆಸಿರುವ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದಿದ್ದಾರೆ.
ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ ಎಂದಿದ್ದಾರೆ.
ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.



