ಧಾರವಾಡ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ ಮತ್ತು ರಾಜ್ಯ ಎನ್.ಎಸ್.ಎಸ್. ಕೋಶದ ವತಿಯಿಂದ ಮಾರ್ಚ 17, 2025 ರಂದು ರಾಜಭವನದ ಗಾಜಿನಮನೆಯಲ್ಲಿ ರಾಜ್ಯ ಪ್ರಶಸ್ತಿ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 2022-23 ಸಾಲಿನ ಎನ್.ಎಸ್.ಎಸ್. ರಾಜ್ಯ ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು. ಕಿಟೆಲ್ ಕಲಾ ಮಹಾವಿದ್ಯಾಲಯಕ್ಕೆ ಉತ್ಕೃಷ್ಟ ಎನ್.ಎಸ್.ಎಸ್. ಘಟಕ ಪ್ರಶಸ್ತಿಯನ್ನು, ಧಾರವಾಡ ಕಿಟೆಲ್ ಕಲಾ ಮಹಾವಿದ್ಯಾಲಯ ಪ್ರಾಚಾರ್ಯರಾದ ಡಾ. ರೇಖಾ ಜೋಗುಳ ಮತ್ತು ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿಯನ್ನು ಮಹಾವಿದ್ಯಾಲಯದ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಡಾ. ಸುರೇಶ ಬಿ. ನ್ಯಾಮತಿ ಅವರಿಗೆ ಪ್ರದಾನ ಮಾಡಿದರು.
ವೇದಿಕೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯದರ್ಶಿ ರಂದೀಪ್ ಡಿ, ಇಲಾಖೆಯ ಆಯುಕ್ತ ಚೇತನ ಆರ್., ರಾಜ್ಯ ಎನ್.ಎಸ್.ಎಸ್. ಅಧಿಕಾರಿ ಪ್ರತಾಪ ಲಿಂಗಯ್ಯ ಮತ್ತು ಎನ್.ಎಸ್.ಎಸ್. ಪ್ರಾದೇಶಿಕ ನಿರ್ದೇಶಕ ಕಾರ್ತಿಕೆಯನ್ ಡಿ. ಹಾಜರಿದ್ದರು.
ಅತ್ಯುತ್ತಮ ಎನ್.ಎಸ್.ಎಸ್. ಘಟಕ ಪ್ರಶಸ್ತಿಯು ಕಿಟೆಲ್ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಆಡಳಿತ ಮಂಡಳಿಯರು ಸಮುದಾಯ ಸೇವೆ ಮತ್ತು ಸಾಮಾಜಿಕ ಜವಾಬ್ದಾರಿಯ ಮನೋಭಾವವನ್ನು ಬೆಳೆಸುವಲ್ಲಿ ಮಾಡಿದ ಸಾಮೂಹಿಕ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ. ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕವು ವಿವಿಧ ಸಮುದಾಯ ಕಾರ್ಯಕ್ರಮಗಳಾದ ರಕ್ತದಾನ ಶಿಬಿರಗಳು, ಆರೋಗ್ಯ ಶಿಬಿರಗಳು, ಪರಿಸರಜಾಗೃತಿ ಅಭಿಯಾನಗಳು, ಶೈಕ್ಷಣಿಕ ಅಭಿಯಾನಗಳು, ಕಾನೂನು ಜಾಗೃತಿ, ಮತದಾನ ಜಾಗೃತಿ, ಮಹಿಳಾ ಜಾಗೃತಿ, ಸ್ವಚ್ಚ ಭಾರತ ಅಭಿಯಾನ ಮತ್ತು ವಿಕಸಿತ್ ಭಾರತ 2047 ಅಭಿಯಾನ ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಈ ರಾಜ್ಯ ಪ್ರಶಸ್ತಿಯು ಯುವ ಮನಸ್ಸುಗಳನ್ನು ದೇಶ ಸೇವೆಯಲ್ಲಿ ರೂಪಿಸಲು. ನಿಸ್ವಾರ್ಥ ಸೇವೆಯ ಮೌಲ್ಯಗಳನ್ನು ಹೆಚ್ಚಿಸಲು ಮತ್ತು ಸಮಾಜದ ಬಗ್ಗೆ ಜವಾಬ್ದಾರಿ ಪ್ರಜ್ಞೆಯನ್ನು ಬೆಳೆಸುವಲ್ಲಿ ಎನ್.ಎಸ್.ಎಸ್.ನ ಪಾತ್ರವನ್ನು ಬಲಪಡಿಸುತ್ತದೆ.
ಸಾಮಾಜಿಕ ಸೇವೆಗೆ ತನ್ನ ಬಲವಾದ ಬದ್ಧತೆಯನ್ನು ಹೊಂದಿರುವ ಕಿಟೆಲ್ ಕಲಾ ಮಹಾವಿದ್ಯಾಲಯ ಅಭಿವೃದ್ಧಿ ಮತ್ತುಯುವ ಸಬಲೀಕರಣದಲ್ಲಿ ತನ್ನ ಪ್ರಯತ್ನಗಳನ್ನು ಮುಂದುವರಿಸಲು ಎದುರು ನೋಡುತ್ತಿದೆ. ಇದರಿಂದಾಗಿ ಹೆಚ್ಚಿನ ವಿದ್ಯಾರ್ಥಿಗಳು ಎನ್.ಎಸ್.ಎಸ್. ಸೇರಲು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ಕೊಡಲು ಇದು ಪ್ರೇರೇಪಿಸುತ್ತದೆ.
ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಷ್ಟ್ರೀಯ ಸೇವಾ ಯೋಜನಾ ಕೋಶ ಎನ್.ಎಸ್.ಎಸ್. ರಾಜ್ಯ ಪ್ರಶಸ್ತಿ 2022-23 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ ಹೊಂದಿದ ಡಾ. ಸುರೇಶ ನ್ಯಾಮತಿ ಅವರಿಗೆ ಹಾಗೂ ಎನ್.ಎಸ್.ಎಸ್. ಘಟಕ ಪ್ರಶಸ್ತಿ ಪಡೆದ ಕಿಟೆಲ ಕಲಾ ಮಹಾವಿದ್ಯಾಲಯಕ್ಕೂ ಧಾರವಾಡ ಬಾಸೆಲ್ ಮಿಷನ್ ಉಚ್ಛ ಶಿಕ್ಷಣ ಸಂಸ್ಥೆ ಬಿಶೋಪರು ಮತ್ತು ಅಧ್ಯಕ್ಷರು ಹಾಗೂ ಧರ್ಮದರ್ಶಿಗಳು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಹಳೆಯ ವಿದ್ಯಾರ್ಥಿಗಳ ಸಂಘ, ಪಾಲಕರ ಸಂಘ ಮುಂತಾದವರು ಈ ಸಂದರ್ಭದಲ್ಲಿ ಶುಭಕೋರಿ ಅಭಿನಂದಿಸಿದರು.




