ಬೆಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲಬುರಗಿಯಲ್ಲಿ ಏಪ್ರಿಲ್ ಮೊದಲನೇ ವಾರದಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿ ಯುವಕ ಮತ್ತು ಯುವತಿಯರು ಭಾಗವಹಿಸಬಹುದು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಉದ್ಯೋಗ ಮೇಳದಲ್ಲಿ 250 ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ಯಾವುದೇ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಉದ್ಯೋಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಲಿಂಕ್: https://udyogamela.skillconnect.kaushalkar.com/ ಗೆ ಭೇಟಿ ನೋಂದಾಯಿಸಿಕೊಳ್ಳಬಹುದಾಗಿದೆ ಅಥವಾ ಕ್ಯೂಆರ್ ಕೋಡ್ ನ್ನು ಸ್ಕ್ಯಾನ್ ಮಾಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಈ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ: 08022075030 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶ್ಯಲಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




