ಬೆಂಗಳೂರು: ರಾಜ್ಯದಲ್ಲಿ ಕಾನೂನು ಸಂಪೂರ್ಣ ಹದಗೆಟ್ಟು ಹೋಗಿದೆ. ದುಷ್ಟ ಶಕ್ತಿಗಳು ಅಟ್ಟಹಾಸ ಮಾಡುತ್ತಿದ್ದು ಕರ್ನಾಟಕ ರಾಜ್ಯ ಗೂಂಡಾರಾಜ್ಯವಾಗುವತ್ತ ದಾಪು ಗಾಲಿಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಪಾದಿಸಿದ್ದಾರೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಬಿಡದಿ ಬಳಿಯ ಟೊಯೋಟಾ ಕಂಪನಿಯ ಗೋಡೆಯ ಮೇಲೆ ಪಾಕಿಸ್ತಾನಕ್ಕೆ ಜೈ ಎಂದು ಕಿಡಿಗೇಡಿಗಳು ಬರೆದಿದ್ದಾರೆ. ಅಲ್ಲದೇ ಶೌಚಾಲಯದಲ್ಲಿ ಕನ್ನಡಿಗರ ಬಗ್ಗೆ ಅವಾಚ್ಯ ಶಬ್ದ ಬಳಸಿ ಬರೆದಿದ್ದಾರೆ ಎಂದು ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಗೃಹ ಮಂತ್ರಿಗಳಿಗೆ ಇಲಾಖೆಯ ಮೇಲೆ ನಿಯಂತ್ರಣ ಇಲ್ಲದಂತಾಗಿದೆ ರಾಜ್ಯದ ಎಲ್ಲ ಭಾಗಗಳಲ್ಲೂ ಒಂದಲ್ಲ ಒಂದು ಕಾರಣಕ್ಕೆ ಗದ್ದಲ ಕೊಲೆ ನಡೆಯುತ್ತಿದೆ ವಿಚ್ಛಿಧ್ರಕಾರಕ ಶಕ್ತಿಗಳು ಕನ್ನಡಿಗರ ಸ್ವಾಭಿಮಾನವನ್ನು ಕೆರಳಿಸುತ್ತಿವೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರಕ್ಕೂ, ಕಾನೂನು ಸುವ್ಯವಸ್ಥೆಗೂ ಅಜಗಜಾಂತರ ವ್ಯತ್ಯಾಸ ಕಾಣುತ್ತಿದೆ. ತಾಳಮೇಳ ಇಲ್ಲ. ಗೃಹ ಸಚಿವರು ಗೃಹ ಇಲಾಖೆ ನಿರ್ವಹಿಸುತ್ತಿದ್ದಾರೋ, ಇಲ್ಲವೋ ಗೊತ್ತಿಲ್ಲ. ಆದರೆ ಜಿಲ್ಲಾ ಮಂತ್ರಿಗಳೇ ಗೃಹ ಖಾತೆಯನ್ನು ನಿಭಾಯಿಸುತ್ತಿದ್ದಾರೆ ಎಂದರು.
ಹಾವೇರಿಯಲ್ಲಿ ಹೋರಿ ಹಬ್ಬದಲ್ಲಿ ಉಂಟಾದ ಸ್ನೇಹ ಲವ್ ಜಿಹಾದ್ನಲ್ಲಿ ಅಂತ್ಯವಾಗಿದೆ. ಸ್ವಾತಿ ಎಂಬ ನರ್ಸ್ ಕೊಲೆಯಾಗಿದೆ. ಪೊಲೀಸರು ಸ್ವಾತಿಯ ಶವವನ್ನು ಕುಟುಂಬಸ್ಥರಿಗೆ ನೀಡದೆ ಸುಟ್ಟು ಹಾಕಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸ್ ವೈಫಲ್ಯ ಇದೆ. ಈ ಬಗ್ಗೆಯೂ ಗಂಭೀರ ಕ್ರಮ ಆಗಬೇಕು ಎಂದರು ಒತ್ತಾಯಿಸಿದರು.
ಹಂಪಿಯಲ್ಲಿ ವಿದೇಶಿ ಮಹಿಳೆ ಮತ್ತು ಹೋಂಸ್ಟೇ ಮಾಲೀಕಳ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರ ನಡೆಸಲಾಗಿದೆ. ಹೀಗಾದರೆ ಹೇಗೆ, ಇದರಿಂದ ವಿದೇಶಿಗರು ರಾಜ್ಯಕ್ಕೆ ಬರುತ್ತಿಲ್ಲ. ಎಲ್ಲ ವಿದೇಶಿಗರು ಹಂಪಿಯನ್ನು ತೊರೆದಿದ್ದಾರೆ. ಅಲ್ಲಿನ ಹೋಂಸ್ಟೇ ಮಾಲೀಕರು ಕಷ್ಟದಲ್ಲಿದ್ದಾರೆ. ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅನಾಥವಾಗಿದೆ ಎಂದರು.
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಮಂತ್ರಿಗಳ ಹೆಸರು ಕೇಳಿ ಬರುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ, ಇಲ್ಲವೋ ಗೊತ್ತಿಲ್ಲ. ಸರ್ಕಾರ ಬದುಕಿದೆಯೋ, ಸತ್ತಿದೆಯೋ ಎಂಬುದು ಅರ್ಥವಾಗುತ್ತಿಲ್ಲ. ಇದೊಂದು ಗೂಂಡಾ ರಾಜ್ಯವಾಗಿದೆ. ನಡೆದಿರುವ ಎಲ್ಲಾ ಘಟನೆಗಳು ರಾಜ್ಯಕ್ಕೆ ಕೆಟ್ಟ ಹೆಸರು ತರುತ್ತಿವೆ. ಹಂಪಿ ಘಟನೆಯಲ್ಲಿ ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಹೀಗಾದರೆ ಹೇಗೆ, ಈ ಘಟನೆಯನ್ನು ನಾವು ಖಂಡಿಸುತ್ತೇವೆ ಎಂದರು.
ಈ ವೇಳೆ ಸದನದಲ್ಲಿ ಸಚಿವರ ಹಾಜರಾತಿ ಕೊರತೆ ಪ್ರಸ್ತಾಪಿಸಿದ ಅವರು, ಹೀಗಾದಲ್ಲಿ ತಾವು ಯಾರಿಗಾಗಿ ಮಾತನಾಡಬೇಕು ಎಂದು ಪ್ರಶ್ನಿಸಿದರು.
ಆಗ ಎದ್ದು ನಿಂತ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇದು ನಿಲುವಳಿ ಸೂಚನೆ ಅಡಿಯಲ್ಲಿ ಬರುವ ವಿಷಯವಲ್ಲ. ಹೀಗಾಗಿ ಇದಕ್ಕೆ ಸರ್ಕಾರದ ಕಾರ್ಯಕಲಾಪಗಳು ನಡೆಯಲು ಅವಕಾಶ ಮಾಡಿಕೊಡಿ ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.
ಆ ಸಂದರ್ಭದಲ್ಲಿ ಮಾತನಾಡಿದ ಸಭಾಧ್ಯಕ್ಷರು, ನೀವೊಬ್ಬ ಸಚಿವರು ಸದನದಲ್ಲಿದ್ದೀರಿ. ಮಂತ್ರಿಗಳು ಸದನದಲ್ಲಿರಬೇಕು. ಗೈರು ಹಾಜರಿಯಾಗುವುದನ್ನು ಸಹಿಸುವುದಿಲ್ಲ. ಸರಿಯಾದ ಸಮಯಕ್ಕೆ ಸದನಕ್ಕೆ ಬಾರದೇ ಸರ್ಕಾರದ ಗೌರವವನ್ನು ತೆಗೆಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸದನಕ್ಕೆ ಸಕಾಲಕ್ಕೆ ಬಾರದಿದ್ದ ಮೇಲೆ ಏಕೆ ಮಂತ್ರಿಯಾಗಬೇಕು? ಸರ್ಕಾರದ ಪರವಾಗಿ ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡಲಾಗದಿದ್ದರೆ ಏಕೆ ಸಚಿವರಾಗಬೇಕು? ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ಬಿಜೆಪಿ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಕಾರ್ಯಸೂಚಿ ಪ್ರಕಾರ ಸದನ ನಡೆಸಲು ತಕರಾರಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ವಿಚಾರ ಗಂಭೀರವಾಗಿದ್ದು, ಅದಕ್ಕೆ ಅವಕಾಶ ಮಾಡಿಕೊಡಬೇಕು. ರಾಜ್ಯದಲ್ಲಿ ಭಯಭೀತಿ ವಾತಾವರಣವಿದೆ. ಹಲವು ಘಟನೆಗಳು ರಾಜ್ಯದಲ್ಲಿ ಘಟಿಸಿವೆ. ಅದರ ಪ್ರಸ್ತಾಪವಾಗಬೇಕು ಎಂದು ಆಗ್ರಹಿಸಿದರು. ಈ ಕುರಿತು ಪರ ವಿರೋಧದ ಚರ್ಚೆಯ ನಂತರ ವಿಷಯವನ್ನು ನಿಯಮ 69ರ ಅಡಿಯಲ್ಲಿ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿ ಸಭಾಧ್ಯಕ್ಷ ಯು ಟಿ ಖಾದರ್ ಅವರು ನಿಳುವಳಿ ಸೂಚನೆಯ ಪ್ರಸ್ತಾಪವನ್ನು ತಿರಸ್ಕರಿಸಿದರು.



