ಬೆಂಗಳೂರು: ರಾಜಧಾನಿ ಮಹಾನಗರ ಬೆಂಗಳೂರು ಸಮೀಪ ಮತ್ತೊಂದು ಅಂತರರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
- ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಪೋಸ್ಟ್ ಕುರಿತು ಯೋಗೇಶ್ ಮಾಸ್ಟರ್ ಸ್ಪಷ್ಟೀಕರಣ
- ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗಾಗಿ ದೀರ್ಘಾವಧಿ ಯೋಜನೆ: ಕೃಷ್ಣ ಬೈರೇಗೌಡ
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ತುಮಕೂರಿನ ಶಿರಾ ಸಮೀಪ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದರೆ ಈ ಬೇಡಿಕೆ ಕಾರ್ಯಸಾಧುವಲ್ಲ. ಶಿರಾದಲ್ಲಿ ವಿಮಾನ ನಿಲ್ದಾಣ ಮಾಡಿದರೆ ಶಿವಮೊಗ್ಗ, ವಿಜಯಪುರದಲ್ಲಿ ಇರುವಂತೆ ಅದೇನಿದ್ದರೂ ಜಿಲ್ಲಾಮಟ್ಟದ್ದಾಗುತ್ತದೆ ಅಷ್ಟೇ ಎಂದರು.
ಬೆಂಗಳೂರಿನ ಜನರಿಗೆ ಅನುಕೂಲ ಆಗಬೇಕಾದರೆ ಅದು ಬೆಂಗಳೂರಿಗೆ ಸನಿಹದಲ್ಲೇ ಇರಬೇಕು. ಆಗ ಮಾತ್ರ ಹೂಡಿಕೆದಾರ ಸಂಸ್ಥೆಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬರುತ್ತಾರೆ. ಇಲ್ಲದಿದ್ಧರೆ ಯೋಜನೆಯೇ ಕಾರ್ಯಸಾಧುವಾಗುವುದಿಲ್ಲ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ ಎಂದರು.
ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಅಂತಿಮಪಡಿಸಿರುವ ತಾಣಗಳನ್ನು ಬಂದು ಪರಿಶೀಲಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನಮ್ಮ ಇಲಾಖೆಯಿಂದ ಈ ತಿಂಗಳ 5ರಂದು ಪತ್ರ ಬರೆಯಲಾಗಿತ್ತು. ಅದರಂತೆ ತಂಡ ಬರುತ್ತಿದೆ. ತಂಡದ ಸೂಚನೆಯಂತೆ ನಾವು ಈ ತಾಣಗಳ ಕಂದಾಯ ನಕಾಶೆ, 10 ವರ್ಷಗಳ ಹವಾಮಾನ ವರದಿ, ಈ ಜಾಗಗಳ ಜಾಮಿತೀಯ ಲಕ್ಷಣಗಳನ್ನು ವಿವರಿಸುವ ಚಿತ್ರ, ಭಾರತೀಯ ಸರ್ವೇ ಇಲಾಖೆಯ ನಕಾಶೆ, ಉದ್ದೇಶಿತ ನಿಲ್ದಾಣದಲ್ಲಿನ ಕಾರ್ಯಾಚರಣೆ ಸ್ವರೂಪ (ವಿಎಫ್ಆರ್/ಐಎಫ್ಆರ್) ತಿಳಿಸುವ ವಿವರ ಮುಂತಾದವನ್ನು ಸಿದ್ಧಪಡಿಸಿಕೊಂಡಿದ್ದೇವೆ ಎಂದರು.
ಬೆಂಗಳೂರಿನಲ್ಲಿ ಈಗ ಇರುವ ವಿಮಾನ ನಿಲ್ದಾಣದ ಮೇಲೆ ಅತೀವ ಒತ್ತಡವಿದೆ. ಇನ್ನೊಂದೆಡೆಯಲ್ಲಿ, 2033ಕ್ಕೆ ಸರಿಯಾಗಿ 150 ಕಿ.ಮೀ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣ ಹೊಂದುವಂತಿಲ್ಲ ಎನ್ನುವ ಷರತ್ತು ಕೊನೆಗೊಳ್ಳಲಿದೆ. ಇವೆಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಎರಡನೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಿನಿಂದಲೇ ಮುಂದಡಿ ಇಡಲಾಗುತ್ತಿದೆ. ಹೀಗೆಯೇ ಮುಂದುವರಿದರೆ 2033ರ ಹೊತ್ತಿಗೆ ಅದು ಬಳಕೆಗೆ ಸಿದ್ಧವಾಗಬಹುದು ಎಂದರು.




