ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ(ಹೈನುಗಾರಿಕೆ) & ಎರೆಹುಳುಗೊಬ್ಬರ ಕುರಿತ 10 ದಿನಗಳ ಉಚಿತ ತರಬೇತಿಯು ಏಪ್ರಿಲ್ 16 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 04 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9241482541, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ.




