ಬೆಂಗಳೂರು: ಡೆವಿಲ್ ಸಿನಿಮಾದ ಚಿತ್ರೀಕರಣದಲ್ಲಿದ್ದಾಗ ನಾಯಕ ದರ್ಶನ್ ಬಂಧಿಸಿದ್ದ ಎಸಿಪಿ ಚಂದನ್, ಈಗ ಅದೇ ಸಿನಿಮಾದಲ್ಲಿ ವಿಲನ್ ಪಾತ್ರ ನಿರ್ವಹಿಸಿದ್ದ ವಿನಯ್ ಅವರನ್ನು ಮಚ್ಚು ಹಿಡಿದ ರೀಲ್ಸ್ ಮಾಡಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಬಿಗ್ಬಾಸ್ ಸ್ಪರ್ಧಿ ವಿನಯ್ ಗೌಡ, ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಮತ್ತೊಬ್ಬ ಬಿಗ್ಬಾಸ್ ಸ್ಪರ್ಧಿ, ಗೆಳೆಯ ರಜತ್ ಜೊತೆ ಸೇರಿಕೊಂಡು ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆ ರೀಲ್ನಲ್ಲಿ ವಿನಯ್ ಮತ್ತು ರಜತ್ ಮಚ್ಚೊಂದನ್ನು ಹಿಡಿದುಕೊಂಡಿದ್ದರು. ಇದನ್ನು ಗಮನಿಸಿದ ಪೊಲೀಸರು ಇಬ್ಬರನ್ನೂ ಠಾಣೆಗೆ ಕರೆದು ವಿಚಾರಣೆ ನಡೆಸಿ, ತಡರಾತ್ರಿ ಬಿಟ್ಟು ಕಳಿಸಿದ್ದರು. ಈ ಇಬ್ಬರ ವಿಚಾರಣೆಯನ್ನು ಚಂದನ್ ಅವರೇ ಮಾಡಿದ್ದಾರೆ.
ರಜತ್ ಹಾಗೂ ವಿನಯ್ ಅವರು ತಾವು ಫೈಬರ್ ಮಚ್ಚನ್ನು ವಿಡಿಯೋದಲ್ಲಿ ಬಳಸಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು. ಆದರೆ ವಿನಯ್ ಹಾಗೂ ರಜತ್ ನೀಡಿದ ನಕಲಿ ಮಚ್ಚಿಗೂ ವಿಡಿಯೋನಲ್ಲಿ ಇರುವ ಮಚ್ಚಿಗೂ ಹೋಲಿಕೆ ಇಲ್ಲ ಎನ್ನಲಾಗುತ್ತಿದ್ದು, ಈಗ ಮತ್ತೊಮ್ಮೆ ವಿನಯ್ ಹಾಗೂ ರಜತ್ ಅವರನ್ನು ವಿಚಾರಣೆ ಕರೆಯಾಗಿದೆ. ಆದರೆ ಇಬ್ಬರೂ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಪೊಲೀಸರು ಅವರ ಮನೆಯ ಬಳಿ ತೆರಳಿ ವಶಕ್ಕೆ ಪಡೆಯಲು ಮುಂದಾಗಿದ್ದಾರೆ.




