ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಹಠಾತ್ ವಿದ್ಯಮಾನಗಳು ನಡೆದಿದ್ದು, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದ ಹಿರಿಯ ನಾಯಕ ಹಾಗೂ ಶಾಸಕ ಮತ್ತು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪದಲ್ಲಿ ಯತ್ನಾಳ್ ಅವರಿಗೆ ಕೇಂದ್ರೀಯ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್ ನೀಡಿದ್ದು, ಅದಕ್ಕೆ ಅವರು ನೀಡಿದ ಉತ್ತರವನ್ನು ಆಧರಿಸಿ ಹೈಕಮಾಂಡ್ ಉಚ್ಛಾಟನೆಯ ಆದೇಶ ಹೊರಡಿಸಿದೆ.
ಆರು ವರ್ಷಗಳ ಕಾಲ ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಬಸನಗೌಡ ಪಾಟೀಲ್ ಅವರನ್ನು ಉಚ್ಛಾಟಿಸಲಾಗಿದೆ ಎಂದು ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಆದೇಶಿಸಿದ್ದಾರೆ.
ಕಳೆದ 2015ರಲ್ಲಿ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿತ್ತು. ಇದೀಗ ಎರಡನೇ ಬಾರಿ ಅವರನ್ನು ಇದೇ ಕಾರಣ ನೀಡಿ ಉಚ್ಛಾಟನೆ ಶಿಕ್ಷೆ ವಿಧಿಸಲಾಗಿದೆ.
ಕಳೆದ ರಾತ್ರಿ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ಶಾಸಕರಾದ ಬಿ ಪಿ ಹರೀಶ್, ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರಿಗೆ ನೋಟಿಸ್ ನೀಡಲಾಗಿತ್ತು. ಅದೇ ರೀತಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪರ ಸಭೆಗಳನ್ನು ನಡೆಸುವ ಮೂಲಕ ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ಮಾಜಿ ಸಚಿವರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ಎಂ ಪಿ ರೇಣುಕಾಚಾರ್ಯ ಅವರಿಗೂ ನೋಟಿಸ್ ನೀಡಲಾಗಿತ್ತು. ಇದೀಗ ಈ ಐದು ಜನರ ಬಗ್ಗೆ ಪಕ್ಷದ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಕೆರಳಿದೆ.




