ಬೆಂಗಳೂರು: ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧ ಹೊಂದಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ವಿಜೇತ ಪೊಲೀಸ್ ಸಿಬ್ಬಂದಿಗಳಿಗೆ ಗೌರವಿಸಿ ಮಾತನಾಡಿದ ಅವರು, ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದರು.
ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು. ನಿಮ್ಮ ಶ್ರಮ ಮತ್ತು ಸೇವೆ ಶ್ಲಾಘನೀಯ ಎಂದರು.
ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಪೊಲೀಸ್ ಇಲಾಖೆ ಮಹತ್ತರವಾದ ಪಾತ್ರ ವಹಿಸುತ್ತದೆ. ಪೊಲೀಸ್ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಿದರೆ ಅಪರಾಧಗಳು ಕಡಿಮೆಯಾಗುತ್ತದೆ. ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂದರು.
ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು. ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು ಎಂದರು.
ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು. ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಹೆಮ್ಮೆಯ ವಿಷಯ ಎಂದರು.
ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ಧ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದರು.
ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ಧವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದರು.



