ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಐ.ಐ.ಎಸ್ ಸಿ (IISc), ಐ.ಐ.ಟಿ (IIT) ಮತ್ತು ಎನ್.ಐ.ಟಿ (NIT) ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸುಗಳಿಗೆ ರೂ. 15,000 ಶಿಷ್ಯವೇತನದೊಂದಿಗೆ ತರಬೇತಿಯನ್ನು ಪಡೆಯಲು ಇಚ್ಛಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
ರಾಜ್ಯ / ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯಗಳಲ್ಲಿ ಬಿ.ಇ/ ಬಿ.ಟೆಕ್ ಕೋರ್ಸುಗಳನ್ನು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಹರಾಗಿರುತ್ತಾರೆ.
ಆಸಕ್ತರು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು (ಗ್ರೇಡ್-1) ರವರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಟಿ.ಸಿ ಪಾಳ್ಯ ಮುಖ್ಯ ರಸ್ತೆ, ಬೆಂಗಳೂರು ಪೂರ್ವ ತಾಲ್ಲೂಕು -560 049 ಇಲ್ಲಿ ಪಡೆದು ಏಪ್ರಿಲ್ 11ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-29535045, 9480843049 ಗೆ ಸಂಪರ್ಕಿಸಬಹುದು.




