ಡಾ. ಬಿ.ಆರ್.ಅಂಬೇಡ್ಕರ್ 134 ನೇ ಜಯಂತಿ
ಧಾರವಾಡ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಅವರ 134 ನೇ ಜನ್ಮ ಜಯಂತಿಯನ್ನು 2024-25 ನೇ ಸಾಲಿಗೆ ಏಪ್ರಿಲ್ 14, 2025 ರಂದು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದೆ. ಪರಿಶಿಷ್ಟ ಜಾತಿಯ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಪರಿಶಿಷ್ಟ ಜಾತಿಯ ಶ್ರೇಯಸ್ಸಿಗಾಗಿ ಶ್ರಮಿಸಿರುವ ವ್ಯಕ್ತಿಗಳು ಸಮಾಜ ಕಲ್ಯಾಣ ಇಲಾಖೆಯ ಆಯಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಅರ್ಜಿ ಪಡೆದು, ಆಯಾ ತಾಲ್ಲೂಕುಗಳಿಗೆ ಏಪ್ರಿಲ್ 08, 2025 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2447201 ಹಾಗೂ ಆಯಾ ತಾಲ್ಲೂಕು ಕಚೇರಿಗಳಿಗೆ ಸಂಪರ್ಕಿಸಬಹುದು.




