ಗಾಂಧಿನಗರ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಲಕ್ಷ್ಮೀಕಾಂತ್ ನೇಮಕ

4 years ago

ಬೆಂಗಳೂರು: ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ನೇಮಕವಾಗಿರುವ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಲಕ್ಷ್ಮೀಕಾಂತ್ ಅವರಿಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇಮಕಾತಿ ಪತ್ರ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀಕಾಂತ್, ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕರಾದ ದಿನೇಶ್ ಗುಂಡೂರಾವ್ , ಬೆಂಗಳೂರು ನಗರ ಕೇಂದ್ರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಅವರ ಸಹಕಾರದಿಂದ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಬೆಂಬಲದಿಂದ ಕಳೆದು 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವಾ ಮನೋಭಾವನೆ, ನಿಷ್ಟೆಯಿಂದ ದುಡಿಯುತ್ತಿದ್ದೇನೆ ಎಂದರು.
ಬಿ.ಜೆ.ಪಿ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ದುರಾಡಳಿತ ಮತ್ತು ಜನವಿರೋಧಿ ನೀತಿಯನ್ನ ಖಂಡಿಸಿ, ಜನಜಾಗೃತಿ, ಪ್ರತಿಭಟನೆಯನ್ನ ಸತತವಾಗಿ ಮಾಡಲಾಗುತ್ತಿದೆ. ಬಡವರ, ದೀನದಲಿತರ ಪರ ಕಾಂಗ್ರೆಸ್ ಪಕ್ಷವಿದೆ. ಜನ ಬಿ.ಜೆ.ಪಿ. ಆಡಳಿತದಿಂದ ರೋಸಿಹೋಗಿದ್ದಾರೆ. 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದರು.
ಗಾಂಧಿನಗರ ಯುವ ಕಾಂಗ್ರೆಸ್ ಮತ್ತು ವಿವಿಧ ಮಂಛೂಣಿ ಘಟಕಗಳ ಕಾಂಗ್ರೆಸ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

Leave a Reply