ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರೋನಾದಲ್ಲೂ ಭ್ರಷ್ಟಾಚಾರ ಮಾಡಲಾಯಿತು. ಬಿಜೆಪಿಯವರೇ ಆಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಈ ಬಗ್ಗೆ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಅನ್ನು ಟೀಕಿಸುವ ಮುನ್ನ ಬಿಜೆಪಿಯವರು ಆತಾವಲೋಕನ ಮಾಡಿಕೊಳ್ಳಲಿ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದರು.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಬಿಜೆಪಿ ಜನಾಕ್ರೋಶ ಯಾತ್ರೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ಆಂತರಿಕ ಸಮಸ್ಯೆಗಳು ನೂರಾರಿವೆ. ಮನೆಯೊಂದು ನೂರು ಬಾಗಿಲು ಎಂಬಂತಾಗಿದೆ. ಅದನ್ನು ದಿಕ್ಕು ತಪ್ಪಿಸಲು ಪ್ರತಿಭಟನೆ ಎಂಬ ಯಾತ್ರೆ ಆರಂಭಿಸಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕೋಟ್ಯಂತರ ರೂಪಾಯಿ ಬಾಕಿ ಬಿಲ್ಗಳನ್ನು ಉಳಿಸಿ ಹೋಗಿದ್ದರು. ಅವರು ಮಾಡಿದ ಪಾಪವನ್ನು ನಾವು ತೀರಿಸುತ್ತಿದ್ದೇವೆ ಎಂದರು.
ಇಂದಿನ ಹಣಕಾಸಿನ ತೊಂದರೆಗೆ ಬಿಜೆಪಿಯವರು ಬೇಕಾಬಿಟ್ಟಿ ಕಾಮಗಾರಿಗಳನ್ನು ಗುತ್ತಿಗೆ ನೀಡಿದ್ದೇ ಕಾರಣ ಎಂದರು.




