ಬೆಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಜಾತಿವಾರು ಜನಗಣತಿ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಅಂದಿನ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜು ನೇತೃತ್ವದ ಆಯೋಗ ಸಿದ್ಧಪಡಿಸಿದ್ದ ವರದಿಯನ್ನು ಆನಂತರ ಸಮಗ್ರವಾಗಿ ಪರಿಶೀಲನೆ ನಡೆಸಿ ಲಭ್ಯವಿರುವ ದತ್ತಾಂಶಗಳ ಆಧಾರದಲ್ಲಿ ಜಯಪ್ರಕಾಶ್ ಹೆಗಡೆ ನೇತೃತ್ವದ ಆಯೋಗ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.
ಈ ವರದಿಯನ್ನು ನಡೆದ ಸಂಪುಟ ಸಭೆಯಲ್ಲಿ ಮಂಡಿಸಲು ಒಪ್ಪಿಗೆ ಸೂಚಿಸಲಾಯಿತು. ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ, ಸಂಪುಟ ಸಭೆಯಲ್ಲಿ ಮಂಡಿಸಲಾಗಿರುವ ವರದಿಯ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು 17ರಂದು ವಿಶೇಷ ಸಂಪುಟ ಸಭೆ ಕರೆಯಲು ತೀರ್ಮಾನಿಸಲಾಗಿದೆ ಎಂದರು.
ಈ ಹಿಂದೆ ಕಾಂತರಾಜು ನೇತೃತ್ವದ ಆಯೋಗ ಹಿಂದುಳಿದ ವರ್ಗಗಳ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮಾಡಲು ತೀರ್ಮಾನಿಸಿತ್ತು ರಾಜ್ಯದ, ಒಟ್ಟು 6.35 ಕೋಟಿ ಜನರ ಸಮೀಕ್ಷೆ ಮಾಡಬೇಕೆಂದು ಗುರಿ ಹಾಕಿಕೊಳ್ಳಲಾಗಿತ್ತು. ಆನಂತರದಲ್ಲಿ 5.98 ಕೋಟಿ ಜನರನ್ನು ಒಳಗೊಂಡ 1.35 ಕೋಟಿ ಕುಟುಂಬಗಳು ಸಮೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ ಶೇ. 97.4ರಷ್ಟು ಜನರ ಮಾಹಿತಿ ಇದೆ. 37 ಲಕ್ಷ ಜನಮಾತ್ರ ಸಮೀಕ್ಷೆಯಿಂದ ಹೊರಗಡೆ ಉಳಿದಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿಗಳು, ಆಯುಕ್ತರು, ಅಧಿಕಾರಿಗಳು, ಜಿ.ಪಂ ಸಿಇಒಗಳು, ಹಿಂದುಳಿದ ವರ್ಗದ ಅಧಿಕಾರಿಗಳು, ತಹಶೀಲ್ದಾರ್, ಕಂದಾಯ ಇಲಾಖೆ ಅಧಿಕಾರಿಗಳು, ಶಿಕ್ಷಕರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. 54 ಮಾನದಂಡದಡಿ ಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆ ಮಾಡಲು ತಜ್ಞರ ತಂಡ ಇತ್ತು. ಈ ಸಮೀಕ್ಷೆಗೆ 192 ಕೋಟಿ ವೆಚ್ಚವಾಗಿದೆ ಎಂದರು.
ವರದಿಯ ಮುಖ್ಯಾಂಶಗಳ ಪ್ರತಿಯನ್ನು ಎಲ್ಲ ಸಚಿವರಿಗೂ ಕೊಡಲಾಗಿದೆ. ಇದೇ 17ರ ವಿಶೇಷ ಸಂಪುಟ ಸಭೆಗೆ ಅಧ್ಯಯನ ಮಾಡಿಕೊಂಡು ಬರಬೇಕು ಎಂದು ಸೂಚಿಸಲಾಗಿದೆ. ಅಂದು ವಿಸ್ತೃತ ಚರ್ಚೆಯ ಬಳಿಕ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದರು.
ಪ್ರತಿಯೊಬ್ಬ ಸಚಿವರಿಗೆ ವರದಿಯನ್ನು ಪರಿಶೀಲಿಸಲು ಅವಕಾಶ ನೀಡಲಾಗಿದೆ. ಎಲ್ಲ ಸಚಿವರು ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಧ್ಯಯನ ಮಾಡಿಕೊಂಡು ಬಂದು ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಬೇಕು ಎಂಬ ತೀರ್ಮಾನಕ್ಕೆ ಬರಲಾಯಿತು ಎಂದರು.
ವರದಿಯ ಪ್ರಮುಖಾಂಶಗಳು:
ಬಾಕ್ಸ್ 1- 2015ರ ಸಮೀಕ್ಷೆಯ ಸಮಗ್ರ ವರದಿ
ಜಾತಿವಾರು ಜನಸಂಖ್ಯಾ ವಿವರ – 1 ಸಂಪುಟ
ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಜಾತಿ)– 1 ಸಂಪುಟ
ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಪಂಗಡಗಳು)– 1 ಸಂಪುಟ
ಜಾತಿ, ವರ್ಗಗಳ ಪ್ರಮುಖ ಲಕ್ಷಣಗಳು (ಎಸ್ಸಿಎಸ್ಟಿ ಬಿಟ್ಟು )– 7 ಸಂಪುಟಗಳು
ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿಅಂಶಗಳು (2 ಸಿ.ಡಿಗಳು)
ಬಾಕ್ಸ್ 2: 2015ರ ಸಮೀಕ್ಷೆಯ ‘ದತ್ತಾಂಶಗಳ ಅಧ್ಯಯನ ವರದಿ–2024’
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಮಾಹಿತಿಯ ಜಾತಿ, ವರ್ಗವಾರು (ಎಸ್ಸಿಎಸ್ಟಿ ಬಿಟ್ಟು )– 4 ಸಂಪುಟಗಳು
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಮಾಹಿತಿಯ ಜಾತಿ, ವರ್ಗವಾರು (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು) – 1 ಸಂಪುಟ
ಜಿಲ್ಲಾ, ತಾಲೂಕುವಾರು, ಜಾತಿವಾರು ಕುಟುಂಬಗಳು ಹಾಗೂ ಜನಸಂಖ್ಯೆಯ ವರದಿ– 30 ಸಂಪುಟಗಳು
ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಪ್ರಾತಿನಿಧ್ಯದ ಕುರಿತ ದ್ವಿತೀಯ ಮೂಲಗಳಿಂದ ಪಡೆದ ವಿವರಗಳು– 1 ಸಂಪುಟ
ಒಂದು ಬಾಕ್ಸ್ನಲ್ಲಿ 13 ಸಂಪುಟಗಳು ಇವೆ. ಇನ್ನೊಂದರಲ್ಲಿ 37 ಸಂಪುಟಗಳು ಸೇರಿದಂತೆ ಒಟ್ಟು 50 ಸಂಪುಟಗಳಿವೆ.




