ದಶಕಗಳ ಕಾಲ ಸೇವೆ ಸಲ್ಲಿಸುತ್ತಿರುವ ನಿಷ್ಟಾವಂತರಿಗೆ ಎಂ ಎಲ್ ಸಿ ಸ್ಥಾನಕ್ಕೆ ಆಗ್ರಹ

12 months ago

ಕಾಂಗ್ರೆಸ್ ಕಾರ್ಯಕರ್ತರಿಗೆ ವಿಧಾನಪರಿಷತ್ ಗೆ ಅವಕಾಶ ನೀಡಿ

ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಿಗೆ ಮನವಿ

ಬೆಂಗಳೂರು: ನಗರದ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕಳೆದ 25ರಿಂದ 35ವರ್ಷಗಳ ಕಾಲ ನಿರಂತರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿರುವ ನಿಷ್ಟಾವಂತ ಕಾಂಗ್ರೆಸ್ ಕಾರ್ಯಕರ್ತರನ್ನ ವಿಧಾನಪರಿಷತ್ ಗೆ ನೇಮಕ ಮಾಡಬೇಕೆಂದು ನಿಷ್ಟಾವಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಯಿತು. ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು, ಉಪ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ಬಿಎಂಟಿಸಿ ಮಾಜಿ ಉಪಾಧ್ಯಕ್ಷೆ ವಿ.ಎಸ್.ಆರಾಧ್ಯ, ಕಾಂಗ್ರೆಸ್ ಪಕ್ಷದ ಮುಖಂಡರಾದ ಚಾಂದ್ ಪಾಷ, ಜಯಸಿಂಹ ಎಲ್.ಭಾರದ್ವಾಜ್, ಆನಂದ್, ಜಿ.ಪ್ರಕಾಶ್, ಎಂ.ಎ.ಸಲೀಮ್ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಸಭೆ ನಡೆಸಿದರು.

ಎಸ್.ಮನೋಹರ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಕಳೆದ 25ರಿಂದ 35ವರ್ಷಗಳಿಂದ ನಿರಂತರವಾಗಿ ಪಕ್ಷ ಅಧಿಕಾರದಲ್ಲಿ ಇರಲಿ, ಇಲ್ಲದೇ ಇರಲಿ ಪಕ್ಷನಿಷ್ಟರಾಗಿ ಸಂಘಟನೆ ಮಾಡುತ್ತಾ ಬಂದಿದ್ದಾರೆ. ಇಂತಹ ನಿಷ್ಚಾವಂತರಾದ ಕಾಂಗ್ರೆಸ್ ಕಾರ್ಯಕರ್ತರಾಗಿ ವಿಧಾನಪರಿಷತ್ ಗೆ  ಅವಕಾಶ ನೀಡಬೇಕು. ಆರ್.ಮಂಜುನಾಥ್, ವಿ.ಎಸ್.ಆರಾಧ್ಯ, ಚಾಂದ್ ಪಾಷ, ಜಯಸಿಂಹ, ಬಾಲರಾಜ್ ಆನೇಕ ನಿಷ್ಟಾವಂತ ಕಾರ್ಯಕರ್ತರಿಗೆ ಅವಕಾಶ ಸಿಗಬೇಕು. ಪಕ್ಷಾಂತರ ಮಾಡಿ ಬಂದವರು, ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡುವವರನ್ನ ಪರಿಗಣನೆ ಮಾಡಬೇಡಿ. ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತ ನಂತರ ವಿಧಾನಪರಿಷತ್ ಸದಸ್ಯರಾಗಲು ಅವಕಾಶ ಕೊಡಬೇಡಿ ಎಂದರು.

ಕಾಂಗ್ರೆಸ್ ಕಾರ್ಯಕರ್ತರಿಗೆ ಜಾತಿ ಇಲ್ಲ, ಕಾಂಗ್ರೆಸ್ ಪಕ್ಷವೆ ನಮ್ಮ ಜಾತಿ. ಈ ನಿಟ್ಟಿನಲ್ಲಿ ವಿಧಾನಪರಿಷತ್ ಗೆ ಕಾರ್ಯಕರ್ತರಿಗೆ ಅವಕಾಶ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷರು, ರಾಜ್ಯ ಉಸ್ತುವಾರಿ ಮತ್ತು  ಮುಖ್ಯಮಂತ್ರಿಗಳಿಗೆ, ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಗುವುದು ಎಂದರು.

Leave a Reply