ಬಳ್ಳಾರಿ: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ – ಬಸವಾದಿ ಶರಣರ ವೈಭವ ರಥಯಾತ್ರೆ ಬಳ್ಳಾರಿಗೆ ಆಗಮಿಸಿತು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸಮುದಾಯದ ಮುಖಂಡರು, ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜು ಮೈದಾನದ ಆವರಣದಲ್ಲಿ ರಥಯಾತ್ರೆಯನ್ನು ಸ್ವಾಗತಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವಾದಿ ಶರಣರ ರಥಯಾತ್ರೆಗೆ ಪೂಜೆ ಸಲ್ಲಿಸಿ ಪುಷ್ಪನಮನಗೈದು, ಗೌರವ ಸಮರ್ಪಿಸಲಾಯಿತು.
ಇದೇ ಏ.29 ಮತ್ತು 30ರಂದು ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ “ಅನುಭವ ಮಂಟಪ – ಬಸವಾದಿ ಶರಣ ವೈಭವ” ಕಾರ್ಯಕ್ರಮದ ಅಂಗವಾಗಿ ರಥಯಾತ್ರೆ ಆಯೋಜಿಸಲಾಗಿದ್ದು, ಮಂಗಳವಾರ ಬಳ್ಳಾರಿ ನಗರಕ್ಕೆ ಆಗಮಿಸಿದ ರಥಯಾತ್ರೆಯು ಸಿರುಗುಪ್ಪ ಮೂಲಕ ರಾಯಚೂರು ಜಿಲ್ಲೆಗೆ ರಥಯಾತ್ರೆಯು ತೆರಳಿತು.
ಜಗತ್ತಿನ ಪ್ರಪ್ರಥಮ ಸಂಸತ್ತು ಅನುಭವ ಮಂಟಪ – ಬಸವಾದಿ ಶರಣರ ವೈಭವ ರಥದಲ್ಲಿ ಬಸವಣ್ಣ ಅವರೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಭಗವಾನ್ ಗೌತಮ ಬುದ್ಧ, ಶಿವಶರಣೆ ಅಕ್ಕಮಹಾದೇವಿ, ಸಂತ ಶಿಶುನಾಳ ಶರೀಪ, ಗುರುನಾನಕ್, ಭಗವಾನ್ ಮಹಾವೀರ, ನಾರಾಯಣ ಗುರು, ಯೇಸು ಕ್ರಿಸ್ತರ ಪ್ರತಿಮೆಗಳನ್ನು ಅಳವಡಿಸಲಾಗಿದೆ.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್, ರಾಷ್ಟ್ರೀಯ ಬಸವ ದಳ ಕಾರ್ಯದರ್ಶಿ ರವಿಶಂಕರ್, ಮುಖಂಡರಾದ ಪನ್ನರಾಜ್ ಸಿರಿಗೇರಿ, ಟಿ.ಹೆಚ್.ಎಂ.ಬಸವರಾಜ್ ಸೇರಿದಂತೆ ಇಲಾಖೆ ಅಧಿಕಾರಿಗಳು ಹಾಗೂ ಇತರರು ಹಾಜರಿದ್ದರು.




