ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಅತ್ಯಂತ ಖಂಡನೀಯ ಎಂದು ಹೇಳಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಭಯೋತ್ಪಾದನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಕಠಿಣ ಕ್ರಮಗಳಿಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಆಕಸ್ಮಿಕವಾದ ಘಟನೆ. ಅಮಾಯಕ ಪ್ರವಾಸಿಗರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಉಗ್ರರ ದಾಳಿಯನ್ನು ಯಾರೂ ಸಮರ್ಥಿಸುವುದಿಲ್ಲ. ಇದು ನಮ ಸಂವಿಧಾನದ ಮೇಲೆ ನಡೆದ ದಾಳಿ ಎಂದರು.
ದಾಳಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ದೆಹಲಿಯ ಕೇಂದ್ರ ಕಚೇರಿಯಲ್ಲಿ ಕಾರ್ಯಕಾರಿ ಸಮಿತಿಯ ಸಭೆ ಕರೆಯಲಾಗಿದೆ. ಭಯೋತ್ಪಾದಕರ ಕೃತ್ಯದ ವಿರುದ್ಧ ಪಕ್ಷದಿಂದ ನಿರ್ಣಯ ತೆಗೆದುಕೊಳ್ಳಲಾಗುವುದು.ಭಯೋತ್ಪಾದನೆಯನ್ನು ಹತ್ತಿಕ್ಕಲು ಎಲ್ಲರೂ ಕೈ ಜೋಡಿಸುತ್ತೇವೆ ಎಂದರು.
ದೇಶ ವಿರೋಧಿಗಳ ವಿರುದ್ಧ ನಾವೆಲ್ಲಾ ಒಂದಾಗಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ. ಭಯೋತ್ಪಾದಕರ ಕೃತ್ಯಗಳ ಬಗ್ಗೆ ಯಾವುದೇ ರಾಜಿ ಇಲ್ಲ. ದಾಳಿಯಿಂದಾಗಿ ಇಡೀ ದೇಶವೇ ಆಘಾತಕ್ಕೆ ಒಳಗಾಗಿದೆ. ಕೇಂದ್ರ ಸರ್ಕಾರ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾಶ್ಮೀರದಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ಕರೆತರುವ ಜೊತೆಗೆ ಮುಂದೆ ನಡೆಯುವ ಅಮರನಾಥ್ ಯಾತ್ರೆಗೂ ಕೂಡ ಅಗತ್ಯ ಭದ್ರತೆ ಒದಗಿಸಬೇಕು. ಭಯೋತ್ಪಾದನಾ ನಿಗ್ರಹವನ್ನು ಸವಾಲಾಗಿ ಸ್ವೀಕರಿಸಬೇಕೆಂದು ಸಲಹೆ ನೀಡಿದರು.
ದೇಶದ ಭದ್ರತೆ ವಿಚಾರದಲ್ಲಿ ರಾಜಕಾರಣ ಮಾಡುವುದು ಬೇಡ. ಕೇಂದ್ರ ಸರ್ಕಾರ ಎಲ್ಲಾ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ. ಸರ್ವಪಕ್ಷ ಸಭೆ ಕರೆದು ಎಲ್ಲರ ಅಭಿಪ್ರಾಯ ಸಂಗ್ರಹಿಸಲಿ ಎಂದರು.
ಕೆಲವರ ಸಲಹೆಗಳು ಪರಿಣಾಮಕಾರಿಯಾಗಿರಬಹುದು. ಕೇಂದ್ರ ಸರ್ಕಾರ ಅಗತ್ಯ ಎನಿಸಿದ ಸಲಹೆಗಳನ್ನು ಅನುಸರಿಸಬಹುದು. ಇಲ್ಲವಾದರೆ ಕಡೆಗಣಿಸಬಹುದು. ಸಾವು-ನೋವುಗಳನ್ನು ತಡೆಯಲು ಭಯೋತ್ಪಾದನೆಯನ್ನು ಹತ್ತಿಕ್ಕಲು ನಿರ್ದಾಕ್ಷಿಣ್ಯ ಕ್ರಮ ಅಗತ್ಯ ಎಂದರು.
ಸಂತ್ರಸ್ತ ಕುಟುಂಬದವರ ಜೊತೆ ನಾವಿದ್ದೇವೆ. ವೈಯಕ್ತಿಕವಾಗಿ ನನಗೆ ಈ ಘಟನೆಯಿಂದ ತುಂಬಾ ನೋವಾಗಿದೆ. ದೇಶ ಆತಂಕಕ್ಕೆ ಸಿಲುಕಿದೆ. ಉಗ್ರರ ಬಗ್ಗೆ ಯಾವುದೇ ಅನುಕಂಪ ತೋರಿಸದೆ ಕಠಿಣ ಸಂದೇಶ ರವಾನೆಯಾಗಬೇಕು. ಪಾಕಿಸ್ತಾನಕ್ಕೂ ಸಂದೇಶ ತಲುಪಬೇಕು ಎಂದರು.
ತಮ್ಮ ಪುತ್ರನ ಆರೋಗ್ಯ ಸರಿಯಿಲ್ಲ. ಹಾಗಾಗಿ ನಾನು ವಾರಕ್ಕೊಮೆ ಬೆಂಗಳೂರಿಗೆ ಬರುತ್ತಿದ್ದೇನೆ. ಇಲ್ಲವಾದರೆ ಜಮ್ಮು-ಕಾಶೀರಕ್ಕೆ ತಕ್ಷಣವೇ ಹೋಗುತ್ತಿದ್ದೆ. ಘಟನಾ ಸ್ಥಳಕ್ಕೆ ಕೇಂದ್ರ ಗೃಹಸಚಿವ ಅಮಿತ್ ಷಾ ತೆರಳಿದ್ದು, ಜಮು – ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜಮು-ಕಾಶ್ಮೀರಕ್ಕೆ ಪ್ರವಾಸೋದ್ಯಮವೇ ಪ್ರಮುಖ ಆದಾಯಮೂಲವಾಗಿದ್ದು, ಭಯೋತ್ಪಾದಕರ ದಾಳಿಯಿಂದ ಆದಾಯಕ್ಕೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಓಮರ್ ಅಬ್ದುಲ್ಲಾ ಹೇಳಿರುವುದನ್ನು ಗಮನಿಸಿದ್ದೇವೆ ಎಂದರು.




