ಬೆಂಗಳೂರು: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಿಂದ ಬೆಂಗಳೂರಿಗೆ ಕಾರಿನಲ್ಲಿ ಬಂದು ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳವು ಮಾಡಿ ಗೋವಾಗೆ ಹೋಗಿ ಮೋಜು ಮಸ್ತಿ ಮಾಡುತ್ತಿದ್ದ ಖದೀಮ ಕಳ್ಳರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹಗರಿಬೊಮ್ಮನಹಳ್ಳಿಯಲ್ಲಿ ಕೂಲಿಕೆಲಸ ಮಾಡುತ್ತಿದ್ದ ಶಿವಕುಮಾರ್ ಬಾವಿಮನಿ ಅಲಿಯಾಸ್ ಗಿರೀಶ್ (27)ಟೆಂಪೋ ಚಾಲಕ ಶಿವನಾಗಪ್ಪ(28)ಹಾಗೂ ಅಟೆಂಡರ್ ಸುದರ್ಶನ್(24)ಬಂಧಿತ ಆರೋಪಿಗಳಾಗಿದ್ದಾರೆ.ಇವರಿಂದ 18.10 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.
ಸ್ನೇಹಿತರಾಗಿದ್ದ ಆರೋಪಿಗಳು ಬೆಂಗಳೂರಿಗೆ ಪ್ರವಾಸಕ್ಕೆಂದು ಬಂದು ಯಲಹಂಕ ಉಪನಗರದ ರಾಮಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿನ ಬೀಗ ಹಾಕಿದ್ದ ಮನೆಗೆ ಕನ್ನ ಹಾಕಿ 45 ಗ್ರಾಂ ಚಿನ್ನಾಭರಣ ಹಾಗೂ 6 ಲಕ್ಷ ನಗದು ದೋಚಿ ಪರಾರಿಯಾಗಿದ್ದರು.
ಈ ಕುರಿತು ದೂರು ಸ್ವೀಕರಿಸಿದ ಪೊಲೀಸರು ತನಿಖೆ ನಡೆಸಿ,ಹಗರಿಬೊಮ್ಮನಹಳ್ಳಿ ದುರ್ಗಮ್ಮ ದೇವಸ್ಥಾನದ ಬಳಿ ಇಬ್ಬರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಪ್ರಕರಣದಲ್ಲಿ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ ಮತ್ತೊರ್ವ ಸ್ನೇಹಿತನ ಬಗ್ಗೆ ಮಾಹಿತಿಯನ್ನು ನೀಡಿದ್ದು ಆತನನ್ನು ಬಂಧಿಸಲಾಗಿದೆ.
ಆರೋಪಿಗಳು ಬೆಂಗಳೂರಿಗೆ ಬಂದು ಕನ್ನ ಹಾಕಿ ಹಗರಿಬೊಮ್ಮನಹಳ್ಳಿಯ ಚಿನ್ನದ ಅಂಗಡಿಯಲ್ಲಿ ಅಡವಿಟ್ಟು ಸ್ನೇಹಿತರ ಜೊತೆ ಗೋವಾಕ್ಕೆ ಹೋಗಿ ಮೋಜು-ಮಸ್ತಿ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾರೆ.




