ಬೆಂಗಳೂರು: ಜಾತಿ ಗಣತಿ ನಡೆಸುವ ಸಂಬಂಧ ಸರ್ಕಾರಕ್ಕೆ ನಿಜವಾದ ಆಸಕ್ತಿ ಇದ್ದಿದ್ದರೆ, ಅವರು ಬಜೆಟ್ನಲ್ಲಿಯೇ ಅನುದಾನ ತೆಗೆದಿರಿಸುತ್ತಿದ್ದರು. ಹಾಗೆ ಮಾಡಿಲ್ಲ. ಈಗ ತರಾತುರಿಯಲ್ಲಿ ಜಾತಿಗಣತಿಯನ್ನು ಘೋಷಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾತಿಗಣತಿ ನಡೆಸುತ್ತೇವೆ ಎಂದು ಘೋಷಿಸಿದೆ. ಆದರೆ ಅದಕ್ಕೆ ಕೇವಲ 515 ಕೋಟಿ ಮೀಸಲಿರಿಸಿದೆ. ಇದು ಯಾವುದಕ್ಕೂ ಸಾಲುವುದಿಲ್ಲ ಎಂದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕರ್ನಾಟಕದಲ್ಲಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಸಾಮಾಜಿಕ ಸಮೀಕ್ಷೆ ನಡೆಸಿತ್ತು. ಅದಕ್ಕೆ 168 ಕೋಟಿ ವೆಚ್ಚ ಮಾಡಿತ್ತು, ಅದೂ ಹತ್ತು ವರ್ಷಗಳ ಹಿಂದೆ. ಆದರೆ ಕೇಂದ್ರ ಸರ್ಕಾರ ಇಡೀ ದೇಶದಲ್ಲಿ ಜಾತಿಗಣತಿ ನಡೆಸಲು 515 ಕೋಟಿ ತೆಗೆದಿರಿಸಿದೆ. ಉತ್ತರ ಪ್ರದೇಶ ಒಂದರಲ್ಲಿ ಜಾತಿಗಣತಿ ನಡೆಸಲೂ ಈ ಹಣ ಸಾಲುವುದಿಲ್ಲ ಎಂದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಸಬಲೀಕರಣದ ಬಗ್ಗೆ ಮೋದಿ ಅವರಿಗೆ ನಿಜವಾದ ಕಾಳಜಿ ಇದ್ದರೆ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಿ ಎಂದರು.
ಮೀಸಲಾತಿ ಮೇಲೆ ಈಗ ಶೇ 50ರ ಮಿತಿ ಇದೆ. ಮೊದಲು ಅದನ್ನು ತೆಗೆದುಹಾಕಿ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ದೊರೆಯುವಂತೆ ಮಾಡಲು ಸಂವಿಧಾನದಲ್ಲಿ ಅವಕಾಶವನ್ನು ನಮ್ಮ ಸರ್ಕಾರವಿದ್ದಾಗ ಕಲ್ಪಿಸಿದ್ದೆವು. ಅದನ್ನು ಮೋದಿ ಅವರ ಸರ್ಕಾರ ಜಾರಿಗೆ ತರಲಿ ಎಂದು ಒತ್ತಾಯಿಸಿದರು.
ಕಾರ್ಮಿಕರ ಸಬಲೀಕರಣಕ್ಕಾಗಿ ರೂಪಿಸಿದ್ದ ಕಾನೂನುಗಳನ್ನು ತನ್ನ ಕಾರ್ಪೊರೇಟ್ ಗೆಳೆಯರ ಅನುಕೂಲ ಆಗುವಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಬದಲಿಸುತ್ತಿದೆ. ಹಿಂದಿನ ಕೇಂದ್ರ ಸರ್ಕಾರಗಳು ರೂಪಿಸಿದ್ದ 44 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ, 4 ಕಾನೂನುಗಳನ್ನು ಮೋದಿ ಸರ್ಕಾರ ಜಾರಿಗೆ ತಂದಿದೆ ಎಂದರು.
ಬ್ರಿಟಿಷರ ಆಳ್ವಿಕೆಯಲ್ಲಿ ಭಾರತೀಯ ಕಾರ್ಮಿಕರಿಗೆ 12 ತಾಸು ಮತ್ತು ಬ್ರಿಟನ್ನ ಕಾರ್ಮಿಕರಿಗೆ 8 ತಾಸು ದುಡಿಮೆಯ ಅವಧಿ ನಿಗದಿ ಮಾಡಲಾಗಿತ್ತು. ಬಿ.ಆರ್.ಅಂಬೇಡ್ಕರ್ ಅವರು 1930ರ ದಶಕದಲ್ಲಿ ವೈಸ್ರಾಯ್ ಸಮಿತಿ ಮುಂದೆ ಈ ತಾರತಮ್ಯವನ್ನು ಹಲವು ಬಾರಿ ಖಂಡಿಸಿದ್ದರು. ಪರಿಣಾಮವಾಗಿ ಭಾರತೀಯ ಕಾರ್ಮಿಕರ ದುಡಿಮೆಯ ಅವಧಿಯನ್ನೂ 8 ಗಂಟೆಗೆ ಇಳಿಸಲಾಗಿತ್ತು. ಅಂಬೇಡ್ಕರ್ ಅವರು ಹೋರಾಡಿ, ಕೊಡಿಸಿದ್ದ ಆ ಹಕ್ಕನ್ನು ಮೋದಿ ಸರ್ಕಾರ ಈಗ ಕಸಿದುಕೊಂಡಿದೆ ಎಂದರು.
ಈಗ 10 ತಾಸಿನವರೆಗೂ ಕೆಲಸ ಮಾಡಿಸಬಹುದು ಎಂದು ಮೋದಿ ಸರ್ಕಾರ ಕಾನೂನು ರೂಪಿಸಿದೆ. ಇದರಿಂದ ಬಡ ಕಾರ್ಮಿಕರಿಗೆ ಅನನಕೂಲವಾಗುತ್ತದೆ. ಮೋದಿ ಅವರ ಕಾರ್ಪೊರೇಟ್ ಗೆಳೆಯರಿಗೆ, ಶ್ರೀಮಂತರಿಗೆ ಲಾಭವಾಗುತ್ತದೆ. ಸಂಪತ್ತಿನ ಅಸಮಾನ ಹಂಚಿಕೆ ಇನ್ನಷ್ಟು ಹೆಚ್ಚುತ್ತಿದೆ ಎಂದರು.




