ಮಂಗಳೂರು: ಹಿಂದುತ್ವ ಪರ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹತ್ಯೆ ನಡೆದ ಕೆಲವೇ ಗಂಟೆಗಳ ಅವಧಿಯಲ್ಲಿ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹತ್ಯೆಗಳ ಹಿನ್ನೆಲೆಯಲ್ಲಿ ದಿಡೀರ್ ಮಂಗಳೂರಿಗೆ ಆಗಮಿಸಿದ ಅವರು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಹತ್ಯೆ ಆರೋಪದಲ್ಲಿ ಬಂಧಿಸಲಾಗಿರುವ ಎಲ್ಲ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ ಎಂದರು.
ಇದೆ ವೇಳೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್,
ಕಿನ್ನಿಪದವಿನಲ್ಲಿ ಮೇ 1 ರಂದು ರಾತ್ರಿ ಸುಹಾಸ್ ಶೆಟ್ಟಿ ಕೊಲೆ ನಡೆದಿತ್ತು. ಈ ಪ್ರಕರಣದ ತನಿಖೆ ನಡೆಸಿದ ವಿಶೇಷ ತಂಡ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ ( 29), ನಿಯಾಜ್ (28), ಕೆಂಜಾರು ಗ್ರಾಮದ ಮೊಹಮ್ಮದ್ ಮುಝಮಿಲ್ (32), ಕಳವಾರು ಕುರ್ಸುಗುಡ್ಡೆಯ ಕಲಂದರ್ ಶಾಫಿ (31), ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ರುದ್ರಪಾದೆಯ ರಂಜಿತ್ (19), ಕಳಸ ಕೋಟೆ ಹೊಳೆ ಮಾವಿನಕೆರೆ ಗ್ರಾಮದ ನಾಗರಾಜ್ (20), ಜೋಕಟ್ಟೆಯ ಮೊಹಮ್ಮದ್ ರಿಜ್ವಾನ್ (28) ಹಾಗೂ ಕಾಟಿಪಳ್ಳ ಮಂಗಳಪೇಟೆಯ ಅದಿಲ್ ಮೆಹರೂಫ್ ಎಂಬ ಎಂಟು ಆರೋಪಿಗಳನ್ನು ಬಂಧಿಸಿದೆ ಎಂದರು.
ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ, ಸಫ್ವಾನ್ ಮೇಲೆ 2023ರಲ್ಲಿ ಸುಹಾಸ್ ಶೆಟ್ಟಿ ಸಹಚರ ಪ್ರಶಾಂತ್ ಹಾಗೂ ಧನರಾಜ್ ಮತ್ತಿತರರು ಹಲ್ಲೆ ನಡೆಸಿದ್ದರು. ಸುಹಾಸ್ ಶೆಟ್ಟಿ ತನ್ನನ್ನು ಕೊಲೆ ಮಾಡಬಹುದು ಎಂಬ ಭಯ ಸಫ್ವಾನ್ ಗೆ ಇತ್ತು. ಈ ಹಿನ್ನೆಲೆಯಲ್ಲಿ ಆತ 2022ರಲ್ಲಿ ಸುರತ್ಕಲ್‌ನಲ್ಲಿ ಕೊಲೆಯಾಗಿದ್ದ ಮಹಮ್ಮದ್ ಫಾಝಿಲ್ ಸೋದರ ಆದಿಲ್‌ನನ್ನು ಈಚೆಗೆ ಸಂಪರ್ಕಿಸಿದ್ದ. ಫಾಝಿಲ್ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಸಲುವಾಗಿ ಆದಿಲ್ 5 ಲಕ್ಷ ರೂ. ನೀಡಲು ಒಪ್ಪಿದ್ದ ಮಂಗಡವಾಗಿ 3 ಲಕ್ಷ ನೀಡಿದ್ದ ಎಂದರು.
ಮೇಲ್ನೋಟಕ್ಕೆ ಇದೊಂದು ಹಳೇ ದ್ವೇಷದ ಹಿನ್ನೆಲೆಯಲ್ಲಿ ನಡೆದಿರುವ ಸುಫಾರಿ ಹತ್ಯೆ ಎಂಬಂತೆ ಕಂಡುಬರುತ್ತದೆ.ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಪೊಲೀಸ್ ಕಸ್ಟಡಿಗೆ ಪಡೆಯುತ್ತೇವೆ. ಅವರ ವಿಚಾರಣೆ ಬಳಿಕ ಹತ್ಯೆಯ ಸಮಗ್ರ ವಿವರ ಸಿಗಲಿದೆ ಎಂದರು.




