ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಟ್ಟ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ವೀಕ್ಷಣೆಗಾರನಾಗಿ ಕೆಲಸ ಮಾಡುತ್ತಿರುವ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ.
ಬೆಳಗಾವಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಆದ ಗೊಂದಲ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಆಕ್ರೋಶಗೊಂಡ ಸಿದ್ದರಾಮಯ್ಯ ಕೈ ಎತ್ತಿದ್ದರು. ಈ ಬಗ್ಗೆ ಏ.28 ರಂದು ಎಚ್.ಎನ್.ಮಧು ಕುಮಾರ್ ವಿಡಿಯೊ ಮಾಡಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ತಕ್ಷಣ ಅವರನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.




