ಕಾರವಾರ: ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಶ್ಯಾಮ ಪ್ರಸಾದ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ತ್ರೀ ಶಕ್ತಿ ಭವನದಲ್ಲಿ ಆಯೋಜಿಸಿದ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರವಾರ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಬೇಸಿಗೆ ಶಿಬರವನ್ನು ಉದ್ಘಾಟಿಸಿ ಮಾತನಾಡಿದರು.
ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ಸೃಜನಾತ್ಮಕ ಕಲೆಯನ್ನು ವೃದ್ಧಿಸಲು ಇಂತಹ ಶಿಬಿರಗಳು ಸಹಾಯವಾಗಲಿದೆ. ಮಕ್ಕಳಿಗೆ ಆಟ-ಪಾಠಗಳ ಜೊತೆಗೆ ನೃತ್ಯ, ಸಾಂಸ್ಕೃತಿಕ ಕಲೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಇಂತಹ ಶಿಬಿರಗಳು ಮೂಲ ಪ್ರೇರಣೆಯಾಗುತ್ತವೆ. ಮಕ್ಕಳ ಬೌದ್ಧಿಕ ವಿಕಾಸದೊಂದಿಗೆ ಭವಿಷ್ಯದ ಜೀವನಕ್ಕೆ ಮಾದರಿಯಾಗುತ್ತದೆ. ಮಕ್ಕಳು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರೂಪಾಕ್ಷಗೌಡ ಪಾಟೀಲ್ ಮಾತನಾಡಿ 5ರಿಂದ 16 ವರ್ಷದ ಮಕ್ಕಳಿಗೆ ಚಿತ್ರಕಲೆ, ಕ್ರಾಫ್ಟ್, ನೃತ್ಯ, ಸಂಗೀತ ಸೇರತಿದಂತೆ 8 ರೀತಿಯ ಕಾರ್ಯಕ್ರಮಗಳನ್ನು ಈ ಶಿಬಿರದಲ್ಲಿ ಕಲಿಸಲಾಗುತ್ತದೆ. ನಾಳೆಯಿಂದ 15 ದಿನಗಳ ವರೆಗೆ ನಡೆಯುವ ಈ ಶಿಬಿರದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿ ಇದರ ಸದುಪಯೋಗವನ್ನು ಪಡೆಯಬೇಕು ಹಾಗೂ ಪೋಷಕರು ಮಕ್ಕಳನ್ನು ಶಿಬಿರಕ್ಕೆ ಸೇರಿಸುವ ಮೂಲಕ ಶಿಬಿರದಲ್ಲಿ ಮಕ್ಕಳ ಬೆಳವಣಿಗೆಗೆ ಹಾಗೂ ಕಲಿಕೆಗೆ ಪೂರಕವಾಗಿರಬೇಕು. ಮಕ್ಕಳು ಜ್ಞಾನ ವೃದ್ಧಿಯನ್ನು ಪಡೆದುಕೊಳ್ಳಲು ಪೋಷಕರು ಮಕ್ಕಳಿಗೆ ಸಹಕರಿಸಬೇಕು ಎಂದರು.
ಸಮಗ್ರ ಶಿಕ್ಷಣ ಕರ್ನಾಟಕ ಕಾರವಾರದ ಜಿಲ್ಲಾ ಯೋಜನಾ ಉಪ ಸಮನ್ವಯ ಅಧಿಕಾರಿ ಭಾಸ್ಕರ ಗಾಂವಕರ ಮಾತನಾಡಿ ಬೇಸಿಗೆ ಅವಧಿಯಲ್ಲಿ ವಿದ್ಯಾರ್ಥಿಗಳು ವ್ಯಕ್ತಿತ್ವದ ವಿಕಸನಕ್ಕೆ ಬೇಕಾಗುವ ಚಟುವಟಿಕೆಗಳಲ್ಲಿ ತೊಡಗುವ ಮೂಲಕ ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಲು ಇಂತಹ ಶಿಬಿರಗಳಲ್ಲಿ ಮಕ್ಕಳು ಭಾಗವಹಿಸಿ, ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಡಾ.ಲಕ್ಷ್ಮೀದೇವಿ, ಅಧೀಕ್ಷಕ ಜಿ.ಆರ್ ಭಟ್ ಜಿಲ್ಲಾ ಬಾಲ ಭವನ ಸಂಯೋಜಕಿ ಅಪೇಕ್ಷಾ ಶಿರೋಡಕರ, ಸಹಾಯಕಿ ಪ್ರೀತಿ ನಾಯ್ಕ, ಕಲ್ಪನಾ ರಶ್ಮಿ ಕಲಾ ಲೋಕದ ಅಧ್ಯಕ್ಷ ಸೂರ್ಯಪ್ರಕಾಶ, ಪೋಷಕರು ಮತ್ತಿತರರು ಹಾಜರಿದ್ದರು.




