ಬೆಂಗಳೂರು: ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆಯಾಗಿದ್ದು, ಮಧ್ಯ ಪ್ರದೇಶದ ಸಚಿವರ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
ಮಧ್ಯಪ್ರದೇಶ ಸಚಿವರ ಹೇಳಿಕೆ ಕರ್ನಲ್ ಸೂಫಿಯಾ ಅವರಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಮಾಡಿದ ಅಪಮಾನವಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಫಿಯಾ ಅವರ ಪತಿ ಬೆಳಗಾವಿ ಜಿಲ್ಲೆಯವರು. ನಿನ್ನೆ ಬೆಳಗಾವಿಯ ಎಸ್ಪಿ ಹೇಳಿಕೆ ನೀಡಿ ಮಧ್ಯ ಪ್ರದೇಶದ ಸಚಿವರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದರು. ಮುಂದೆ ಇದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಟೀಕೆ ಮಾಡಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಇದು ರಾಜ್ಯ ಮತ್ತು ದೇಶಕ್ಕೆ ಮಾಡಿದ ಅಪಮಾನ. ಸೂಕ್ತ ಸೂಕ್ಷ್ಮ ಪರಿಸ್ಥಿತಿಯಂತಹ ವೇಳೆಯಲ್ಲಿ ಇಂತಹ ಕೀಳು ಮನಸ್ಥಿತಿ ಯಾರಿಗೂ ಬರಬಾರದು ಎಂದರು.




