ಬೆಂಗಳೂರು: ಬೆಂಗಳೂರು, ಗ್ರಾಮಾಂತರ, ತುಮಕೂರು, ಯಾದಗಿರಿ, ಮಂಗಳೂರು, ವಿಜಯಪುರದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು 7 ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಕೆಡವಿ ಕೋಟ್ಯಾಂತರ ಮೌಲ್ಯದ ಅಕ್ರಮ ಆಸ್ತಿಪಾಸ್ತಿ ಪತ್ತೆಹಚ್ಚಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಭ್ರಷ್ಟಚಾರದ ಆರೋಪದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಬಲೆಗೆ ಕೆಡವಿರುವ 7 ಅಧಿಕಾರಿಗಳಿಗೆ ಸೇರಿದ 40 ಕಡೆಗಳಲ್ಲಿ ದಾಳಿ ನಡೆಸಿ ವಶಕ್ಕೆ ಪಡೆದಿರುವ ನಗದು, ಚಿನ್ನ, ಬೆಳ್ಳಿಆಭರಣ, ವಾಹನಗಳು, ಮನೆ, ನಿವೇಶನಗಳ ದಾಖಲೆಗಳು ಸೇರಿ ಕೋಟ್ಯಾಂತರ ಮೌಲ್ಯದ ಅಕ್ರಮ ಆಸ್ತಿಪಾಸ್ತಿಯ ಪರಿಶೀಲನೆ ನಡೆಸಿದ್ದಾರೆ.
ತುಮಕೂರಿನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ್, ಮಂಗಳೂರಿನ ಸರ್ವೆ ಸೂಪರ್ವೈಸರ್ ಮಂಜುನಾಥ್, ವಿಜಯಪುರದ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧಿಕಾರಿ ರೇಣುಕಾ, ಬೆಂಗಳೂರಿನ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ ಹೆಚ್ಚುವರಿ ನಿರ್ದೇಶಕ ಮುರಳಿ ಟಿವಿ, ಕಾನೂನು ಮಾಪನಶಾಸ್ತ್ರ ಇನ್ಸ್‌ಪೆಕ್ಟರ್ ಹೆಚ್ ಆರ್ ನಟರಾಜ್, ಹೊಸಕೋಟೆ ತಾಲೂಕು ಕಛೇರಿ ಎಸ್ ಡಿಎ ಅನಂತ್ ಕುಮಾರ್, ಯಾದಗಿರಿಯ ಶಹಾಪುರ ತಾಲೂಕು ಕಚೇರಿ ಸಿಬ್ಬಂದಿ ಉಮಾಕಾಂತ್ ಅವರ ಕಚೇರಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ 12, ತುಮಕೂರು 7, ಬೆಂಗಳೂರು ಗ್ರಾಮಾಂತರದ 8, ಯಾದಗಿರಿ 5, ಮಂಗಳೂರಿನ 4 ಮತ್ತು ವಿಜಯಪುರದ 4 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತುಮಕೂರಿನ 7 ಕಡೆ ದಾಳಿ: ತುಮಕೂರಿನಲ್ಲಿ ಒಟ್ಟು ಏಳು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ನಿರ್ಮಿತಿ ಕೇಂದ್ರ ಎಂ.ಡಿ. ರಾಜಶೇಖರ ಎಂಬುವವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ ಈ ವೇಳೆ ಸಪ್ತಗಿರಿ ಬಡಾವಣೆಯ ಎಸ್‌ಎಸ್ ಪುರಂನಲ್ಲಿರುವ ರಾಜಶೇಖರ ಅವರ ಸಹೋದರನ ಮನೆ ಮೇಲೂ ದಾಳಿ ನಡೆಸಲಾಗಿದೆ.ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ 10 ಮಂದಿ ಅಧಿಕಾರಿಗಳು ಏಕಕಾಲದಲ್ಲಿ ಈ ದಾಳಿ ನಡೆಸಿದ್ದಾರೆ.
ಕಲಬುರ್ಗಿಯಲ್ಲಿ ದಾಳಿ: ಕಲಬುರ್ಗಿಯ ಶಹಾಪೂರ ತಹಸೀಲ್ದಾರ್ ಉಮಾಕಾಂತ ಹಳ್ಳಿ ಅವರ ಮನೆ ಮೇಲೂ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಅಕ್ಕಮಹಾದೇವಿ ಬಡಾವಣೆಯಲ್ಲಿರುವ ತಹಸೀಲ್ದಾರ್ ಅವರ ಮನೆ ಮತ್ತು ಕಚೇರಿಯಲ್ಲಿ ಕಡತ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು, ಯಾದಗಿರಿ, ಮಂಗಳೂರಿನ ಸರ್ವೇ ಸೂಪರ್ ವೈಸರ್ ಮಂಜುನಾಥ್, ವಿಜಯಪುರದ ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧಿಕಾರಿ ರೇಣುಕಾ, ಯಾದಗಿರಿಯ ಶಹಾಪುರ ತಾಲೂಕು ಕಚೇರಿ ಅಧಿಕಾರಿ ಉಮಾಕಾಂತ್ ಅವರ ಮನೆ ಮತ್ತು ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿಜಯಪುರದಲ್ಲಿ ದಾಳಿ: ವಿಜಯಪುರ ನಗರದ ಸೆಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ಡಾ. ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ಅವರ ನಿವಾಸದ ಮೇಲೆ ದಾಳಿ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೋದನಹೊಸಹಳ್ಳಿಯಲ್ಲಿರುವ ಎಸ್ಡಿಎ ಅನಂತ್ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ಮಾಡಿದೆ. ದೇವನಹಳ್ಳಿ ಹಾಗೂ ಹೊಸಕೋಟೆಯಲ್ಲಿ ಭೂ ಮಂಜೂರಾತಿ ವಿಭಾಗದಲ್ಲಿ ಕೆಲಸ ಮಾಡಿದ್ದ ಅನಂತ್, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾ ದಾಳಿ ನಡೆಸಿದ್ದಾರೆ.




